ಅರ್ಥಪೂರ್ಣ ಹಾಗೂ ಸಂಭ್ರಮದಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ ಆಚರಿಸಿ ಯಶಸ್ವಿಗೊಳಿಸಿ: ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ

Jul 27, 2023 - 19:32
 0  66

Google  News WhatsApp Telegram Facebook

ಅರ್ಥಪೂರ್ಣ ಹಾಗೂ ಸಂಭ್ರಮದಿಂದ  ಸ್ವಾತಂತ್ರ್ಯೋತ್ಸವ  ದಿನಾಚರಣೆ ಆಚರಿಸಿ ಯಶಸ್ವಿಗೊಳಿಸಿ: ಜಿಲ್ಲಾಧಿಕಾರಿ  ಡಾ.ಸುಶೀಲಾ ಬಿ

Janaa Akrosha News Desk.

ಸ್ವಾತಂತ್ರ್ಯೋತ್ಸವ ದಿನಾಚರಣೆಯ ಹಿನ್ನಲೆಯಲ್ಲಿ ಪೂರ್ವಭಾವಿ ಸಭೆ

ಯಾದಗಿರಿ: ಜುಲೈ, 27 :- ಆಗಸ್ಟ್ 15 ರಂದು ನಡೆಯುವ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಜಿಲ್ಲಾಡಳಿತ ವತಿಯಿಂದ ಅರ್ಥಪೂರ್ಣವಾಗಿ ಹಾಗೂ ಸಂಭ್ರಮದಿಂದ ಅಚ್ಚುಕಟ್ಟಾಗಿ ಆಚರಿಸಿ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಸುಶೀಲ ಬಿ. ಅವರು ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಗುರುವಾರ ನಡೆದ ಸ್ವಾತಂತ್ರ್ಯೋತ್ಸವ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ಅವರು ಮಾತನಾಡಿದರು.

ಕಾರ್ಯಕ್ರಮವು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಅಚ್ಚುಕಟ್ಟಾಗಿ ಹಮ್ಮಿಕೊಳ್ಳಬೇಕು. ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾಡಳಿತ ವತಿಯಿಂದ ನಡೆಯುವ ಧ್ವಜಾರೋಹಣ ಕಾರ್ಯಕ್ರಮಕ್ಕೆ ಸಂಬಂಧಿಸಿದ ಅಧಿಕಾರಿಗಳು ಅವಶ್ಯಕ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು

ವೇದಿಕೆ ಸಿದ್ದತೆ,ಗಣ್ಯರಿಗೆ ಆಸನದ ವ್ಯವಸ್ಥೆ ಮಾಡಿಕೊಳ್ಳಬೇಕು. ಶಿಷ್ಠಾಚಾರದಂತೆ ಅತಿಥಿ ಗಣ್ಯರನ್ನು ಆಹ್ವಾನಿಸಬೇಕು. ಆಹ್ವಾನ ಪತ್ರಿಕೆ ಮುದ್ರಿಸಬೇಕು. ಕವಾಯತು ಅತ್ಯುತ್ತಮವಾಗಿ ನಡೆಸಲು ಪೂರ್ವಭಾವಿ ತರಬೇತಿ, ಸಿದ್ದತೆ ಮಾಡಿಕೊಳ್ಳಬೇಕು. ಶಾಮಿಯಾನಾ,ವಿದ್ಯಾರ್ಥಿ, ಸಾರ್ವಜನಿಕರಿಗೆ ಪ್ರತ್ಯೇಕವಾಗಿ ಕುಳಿತುಕೊಳ್ಳಲು ಆಸನದ ವ್ಯವಸ್ಥೆ, ಚಿಕಿತ್ಸಾ ಅಂಬ್ಯುಲನ್ಸ ನುರಿತ ವೈದ್ಯರೊಂದಿಗೆ ಹಾಗೂ ಅಗ್ನಿಶಾಮಕ ವಾಹನದ ವ್ಯವಸ್ಥೆ ಮಾಡಬೇಕು. ಮೈದಾನದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಸ್ವಚ್ಛತೆ ನಿರ್ವಹಿಸಬೇಕು. ದೀಪಾಲಂಕಾರ, ಇನ್ನಿತರ ಕಾರ್ಯಕ್ರಮ ಹಾಗೂ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸುವ ಕುರಿತು ಭಾವೈಕ್ಯತಾ ಸಮಿತಿ ಹಾಗೂ ಡಿಡಿಪಿಐ ಸಮನ್ವಯತೆಯಿಂದ ಕ್ರಮ ಕೈಗೊಳ್ಳಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು , ಸರ್ಕಾರೇತರ ಸಂಘ ಸಂಸ್ಥೆಗಳವರು, ಭಾಗವಹಿಸಬೇಕು.ವಿವಿಧ ಸಮಿತಿಗಳನ್ನು ರಚಿಸಲು ಹಾಗೂ ಸಂಬಂಧಿಸಿದ ಸಮಿತಿಯ ಅಧಿಕಾರಿಗಳ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಲು ಅವರು ಸೂಚಿಸಿದರು.

ಅದರಂತೆ ಎಲ್ಲ ತಾಲೂಕಾಮಟ್ಟದಲ್ಲಿ ಮಾರ್ಗಸೂಚಿ ಅನ್ವಯ, ಶಿಷ್ಟಾಚಾರ ಪಾಲನೆ ಮತ್ತು ವೇದಿಕೆ ನಿರ್ಮಾಣ ಸೇರಿದಂತೆ ಇನ್ನಿತರ ವ್ಯವಸ್ಥೆಗಳನ್ನು ನೋಡಿಕೊಳ್ಳುವಂತೆ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾಮಟ್ಟದಲ್ಲಿ ಧ್ವಜಾರೋಹಣ ಹಿನ್ನಲೆಯಲ್ಲಿ ರಾಷ್ಟ್ರಗೀತೆ, ನಾಡಗೀತೆ, ಧ್ವಜಾರೋಹಣ ಮತ್ತು ಇನ್ನಿತರ ಕುರಿತು ಅಗತ್ಯ ಸಿದ್ದತೆಗಳನ್ನು ಮಾಡಿಕೊಂಡು ಅಚ್ಚುಕಟ್ಟಾಗಿ ನಿರ್ವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಅವರು ನಿರ್ದೇಶನ ನೀಡಿದರು.

ಪೊಲೀಸ್ ಇಲಾಖೆ, ಅಬಕಾರಿ ಇಲಾಖೆ, ಅಗ್ನಿಶಾಮಕದಳ ಸೇರಿದಂತೆ ಕವಾಯತು ತಂಡಗಳನ್ನು ರಚಿಸಿಬೇಕು ಮತ್ತು ಜಿಲ್ಲೆಯ ವಿವಿಧ ಕಾರ್ಯಕ್ರಮ ಯಶಸ್ವಿಗೆ ಅಧಿಕಾರಿಗಳು ನೆರವಾಗಬೇಕು ಎಂದರು.

ತಾಲೂಕುಗಳಲ್ಲಿಯೂ ಸಹ ಆಯಾ ವ್ಯಾಪ್ತಿಯ ತಹಶೀಲ್ದಾರರು ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ತಾಲೂಕಾಡಳಿತ ವತಿಯಿಂದ ಮಾರ್ಗಸೂಚಿಗಳನ್ವಯ ಆಯೋಜಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ ವೇದಮೂರ್ತಿ, ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್ , ಡಿವೈಎಸ್ಪಿ ಬಸವೇಶ್ವರ, ಭಾವೈಕ್ಯತಾ ಸಮಿತಿ ಮುಖಂಡರಾದ ಬಾಬು ದೋಖಾ, ಚನ್ನಪ್ಪಗೌಡ ಮೋಸಂಬಿ, ಶಂಕರ್ ಸೋನಾರ್, ವಿಶ್ವನಾಥ ಸಿರವಾರ, ಶರಣಪ್ಪ ಜಾಕಾ, ಡಿಡಿಪಿಯು ಚನ್ನಬಸವ ಕುಳಗೇರಿ, ಡಿಡಿಪಿಐ ಮಂಜುನಾಥ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿ ಉತ್ತರಾದೇವಿ, ಕಾರ್ಮಿಕ ಇಲಾಖೆ ಅಧಿಕಾರಿ ಉಮಾಶ್ರೀ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಸಂಜೀವಕುಮಾರ ರಾಯಚೂರಕರ್, ಕ್ರೀಡಾ ಇಲಾಖೆ ಅಧಿಕಾರಿ ರಾಜು ಬಾವಿಹಳ್ಳಿ, ಯಾದಗಿರಿ ತಹಶೀಲ್ದಾರ ಅಣ್ಣಾರಾವ್ ಪಾಟೀಲ, ಶಹಾಪುರ ತಹಶೀಲ್ದಾರ ಉಮಾಕಾಂತ ಹಳ್ಳೆ, ಹಾಗೂ ಇನ್ನಿತರ ತಾಲೂಕು ಮತ್ತು ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Google  News WhatsApp Telegram Facebook
HTML smaller font

.

.