ಮಕ್ಕಳು ಮತ್ತು ಮಹಿಳೆಯರು ಸರ್ಕಾರದ ಸೌಲಭ್ಯಗಳಿಂದ ವಂಚಿರಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ

Sep 3, 2023 - 10:03
 0  53

Google  News WhatsApp Telegram Facebook

ಮಕ್ಕಳು ಮತ್ತು ಮಹಿಳೆಯರು ಸರ್ಕಾರದ ಸೌಲಭ್ಯಗಳಿಂದ ವಂಚಿರಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ

Janaa Akrosha News Desk.

ಮಕ್ಕಳು ಮತ್ತು ಮಹಿಳೆಯರು ಸರ್ಕಾರದ ಸೌಲಭ್ಯಗಳಿಂದ ವಂಚಿರಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ

ಯಾದಗಿರಿ: ಸೆಪ್ಟೆಂಬರ್, 02 ; ಮಹಿಳೆಯರ ಹಾಗೂ ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ಸರ್ಕಾರವು ಹಲವು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಈ ಸೌಲಭ್ಯಗಳಿಂದ ಮಕ್ಕಳು ಮತ್ತು ಮಹಿಳೆಯರು ವಂಚಿರಾಗದಂತೆ ಕ್ರಮವಹಿಸಲು ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳ ಜಿಲ್ಲಾಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಹಿಳೆ ಮತ್ತು ಮಕ್ಕಳಿಗಾಗಿ ಜಾರಿಯಲ್ಲಿರುವ ಅನೇಕ ಯೋಜನೆ, ಸೇವೆಗಳನ್ನು ಒಗ್ಗೂಡಿಸಿ ನೀಡುವ ವ್ಯವಸ್ಥೆಯನ್ನು ಉತ್ತಮ ಪಡಿಸುವಲ್ಲಿ ಅಧಿಕಾರಿಗಳು  ಹೆಚ್ಚು ಒತ್ತುಕೊಡಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಮಕ್ಕಳ ಮತ್ತು ಮಹಿಳೆಯರಿಗಾಗಿ ಸರ್ಕಾರವು ಐಸಿಡಿಎಸ್ ಜಿಲ್ಲಾ ಮಟ್ಟದ ಸಮಿತಿ, ರಾಷ್ಟ್ರೀಯ ಪೋಷಣ್ ಅಭಿಯಾನ, ಪ್ರಧಾನ ಮಂತ್ರಿ ಮಾತೃವಂದನಾ, ಬಾಲ್ಯ ವಿವಾಹ ತಡೆಯುವ ಮತ್ತು ಮಹಿಳೆಯರ ಹಾಗೂ ಮಕ್ಕಳ ಕಳ್ಳ ಸಾಗಾಣಿಕೆ ತಡೆ ಸಮಿತಿ, ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ ಸಮಿತಿ, ಸಾಂತ್ವನ  ಯೋಜನೆ ಸಮಿತಿ,  ಸಖೀ ಒನ್ ಸ್ಟಾಫ್ ಸಮಿತಿ, ಜಿಲ್ಲಾಮಟ್ಟದ ಸ್ವಾಧಾರ ಗೃಹ ಸಮನ್ವಯ ಸಮಿತಿ, ದಮನಿತ ಮಹಿಳೆಯರ ಜಿಲ್ಲಾ ಮಟ್ಟದ ಸಲಹಾ ಸಮಿತಿ, ಲಿಂಗತ್ವ ಅಲ್ಪಸಂಖ್ಯಾತರ ( ಟ್ರಾನ್ಸ್ ಜೆಂಡರ್)  ಸಮನ್ವಯ ಮತ್ತು ಉಸ್ತುವಾರಿ ಕೋಶ, ಭಾಗ್ಯಲಕ್ಷ್ಮೀ ಯೋಜನೆ ಹೀಗೆ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಮಕ್ಕಳ ಸರ್ವಾಂಗೀಣ ಅಭಿವೃದ್ಧಿ ಮತ್ತು ಮಹಿಳೆಯರ ಸಬಲೀಕರಣ ಈ ಯೋಜನೆಗಳ ಪ್ರಮುಖ ಉದ್ದೇಶವಾಗಿದೆ. ಮಹಿಳೆಯರ ಆರ್ಥಿಕ ಅಭಿವೃದ್ಧಿಯೊಂದಿಗೆ ಆರ್ಥಿಕ ಸಮಾನತೆ ಮತ್ತು ಸಾಮಾಜಿಕ ನ್ಯಾಯದೊಂದಿಗೆ ಸಮಗ್ರವಾಗಿ ಮುಖ್ಯವಾಹಿನಿಗೆ ತರುವ ಮೂಲ ಉದ್ದೇಶವನ್ನು ಹೊಂದಿದೆ. ಮಹಿಳೆಯರಿಗೆ ಶಿಕ್ಷಣ, ಅರಿವು ಮೂಡಿಸುವ ಮೂಲಕ ಸಶಕ್ತರನ್ನಾಗಿ ಮಾಡುವುದು ಅದರಲ್ಲೂ ಕೌಶಲ್ಯ ಅಭಿವೃದ್ಧಿ ಮತ್ತು ಆರ್ಥಿಕ ಚಟುವಟಿಕೆ ಒತ್ತುಕೊಡುವ ಮೂಲಕ ಮಹಿಳೆಯರಲ್ಲಿ ದುಡಿಮೆಯ ಶಕ್ತಿ ಮತ್ತು ಜೀವನಮಟ್ಟವನ್ನು ಹೆಚ್ಚಿಸುವುದೇ ಆಗಿದೆ ಎಂದು ಜಿಲ್ಲಾಧಿಕಾರಿ ನುಡಿದರು.

ಮಕ್ಕಳಿಗೆ ಅನುಕೂಲವಾಗಲೆಂದು ಮಂಜೂರಾಗಿರುವ ಅಂಗನವಾಡಿ ಕೇಂದ್ರಕ್ಕೆ ಅಗತ್ಯ ಮೂಲ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿ ಸೂಚಿಸಿದರು.

ದಮನಿತ ಮಹಿಳೆಯರು ನೆಮ್ಮದಿಯ ಬದುಕು ನಡೆಸಲು ಪ್ರೋತ್ಸಾಹ ಧನ, ಸ್ವಯಂ ಉದ್ಯೋಗಕ್ಕಾಗಿ ಸಾಲ ಸೌಲಭ್ಯ, ವಸತಿ ಸೌಲಭ್ಯ ಸೇರಿದಂತೆ ಹಲವಾರು ಸವಲತ್ತು ನೀಡಲಾಗುತ್ತಿದೆ. ಕಾನೂನು ನೆರವೂ ಒದಗಿಸಲಾಗುವುದು. ಅವರ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ ಆಗಿದೆ ಎಂದು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.

ಸಖಿ ಒನ್‌ ಸ್ಟಾಪ್‌ ಸೆಂಟರನಲ್ಲಿ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವೈದ್ಯಕೀಯ, ಪೊಲೀಸ್‌, ಕಾನೂನು ನೆರವು, ಆಪ್ತ ಸಮಾಲೋಚನೆ ಮತ್ತು ವಸತಿ ಸೌಲಭ್ಯವನ್ನು ಒದಗಿಸಲಾಗುತ್ತಿದೆ. ಈ ಯೋಜನೆಯ ಸೌಲಭ್ಯವನ್ನು 18 ವರ್ಷದೊಳಗಿನ ಬಾಲಕಿಯರು  ಎಲ್ಲ ಮಹಿಳೆಯರು ಪಡೆಯಬಹುದಾಗಿದೆ. ಈ ಕೇಂದ್ರ ದಿನದ 24 ಗಂಟೆಯೂ ಕಾರ್ಯನಿರತವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

 ಆರೋಗ್ಯವಂತ ಮಕ್ಕಳಿಗಾಗಿ  ಸರ್ಕಾರದ ನೇತೃತ್ವದಲ್ಲಿ ಇಲಾಖೆಯು ಅನುಷ್ಠಾನಗೊಳಿಸುತ್ತಿರುವ ಪೋಷಣ್ ಅಭಿಯಾನ, ಮಾತೃವಂದನಾ  ಮಹತ್ತರ ಯೋಜನೆಗಳಡಿ ಗರ್ಭಿಣಿಯರಿಗೆ ಮತ್ತು ಮಕ್ಕಳಿಗೆ ಪೌಷ್ಠಿಕ ಆಹಾರ ಒದಗಿಸಿ ಅಪೌಷ್ಟಿಕತೆಯನ್ನು ನೀಗಿಸುವ ಶ್ರಮಿಸುತ್ತಿದೆ ಪೌಷ್ಟಿಕ ಆಹಾರ ಸೇವನೆ ಕುರಿತು ತಾಯಂದಿರಿಗಷ್ಟೆ ಅಲ್ಲದೆ ಕುಟುಂಬ ಸದಸ್ಯರಿಗೂ ಅರಿವು ಮೂಡಿಸಿ ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಈ ಸಂದರ್ಭದಲ್ಲಿ   ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ರವಿಂದ್ರ ಎಲ್ ಹೊನಾಳ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗರಿಮಾ ಪನ್ವಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ವೀರನಗೌಡ, ಮಹಿಳಾ ಇಲಾಖೆಯ ಜಿಲ್ಲಾ ನಿರೂಪಣಾ ಅಧಿಕಾರಿ ಪ್ರೇಮಮೂರ್ತಿ ಕೆ ಸೇರಿದಂತೆ ಇನ್ನಿತರು ಉಪಸ್ಥಿತರಿದ್ದರು

Google  News WhatsApp Telegram Facebook
HTML smaller font

.

.