“ಜಿಲ್ಲಾ ಸಾಕ್ಷರತಾ ಪ್ರಮಾಣ ಹೆಚ್ಚಿಸಲು ವಿಶೇಷ ಗಮನ ನೀಡಿ”                    ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶ್ರೀ ಮನೋಜ್ ಜೈನ್

Nov 1, 2023 - 11:35
 0  12

Google  News WhatsApp Telegram Facebook

“ಜಿಲ್ಲಾ ಸಾಕ್ಷರತಾ ಪ್ರಮಾಣ ಹೆಚ್ಚಿಸಲು ವಿಶೇಷ ಗಮನ ನೀಡಿ”                    ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶ್ರೀ ಮನೋಜ್ ಜೈನ್

Janaa Akrosha News Desk.

“ಜಿಲ್ಲಾ ಸಾಕ್ಷರತಾ ಪ್ರಮಾಣ ಹೆಚ್ಚಿಸಲು ವಿಶೇಷ ಗಮನ ನೀಡಿ”
                   ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶ್ರೀ ಮನೋಜ್ ಜೈನ್


ಯಾದಗಿರಿ : ಅಕ್ಟೋಬರ್ 31, : ಜಿಲ್ಲೆಯಲ್ಲಿ ಸಾಕ್ಷರತಾ ಪ್ರಮಾಣ ಹೆಚ್ಚಿಸಲು ವಿಶೇಷ ಗಮನ ನೀಡುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹಜ್ ಮತ್ತು ವಕ್ಫ್ ಇಲಾಖೆ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಶ್ರೀ ಮನೋಜ್ ಜೈನ್ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

     ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸದ್ಯ 2323 ಪೂರ್ಣಾವಧಿ ಶಿಕ್ಷಕರು, 2300 ಅತಿಥಿ ಶಿಕ್ಷಕರು, ಕರ್ತವ್ಯ ನಿರ್ವಹಿಸುತ್ತಿದ್ದು, ಹೆಚ್ಚಿನ ಶಿಕ್ಷಕರು ಇರುವುದರಿಂದ ಶಿಕ್ಷಣ ವ್ಯವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು. ವಿಶೇಷವಾಗಿ ಜಿಲ್ಲೆಯಲ್ಲಿ ಸಾಕ್ಷರತಾ ಪ್ರಮಾಣ ಹೆಚ್ಚಿಸಲು ಶಿಕ್ಷಣ ಇಲಾಖೆ ಹಾಗೂ ವಯಸ್ಕರ ಶಿಕ್ಷಣ ಇಲಾಖೆ ಅಧಿಕಾರಿಗಳು ವಿಶೇಷ ಕಾರ್ಯಕ್ರಮವನ್ನು ರೋಪಿಸುವಂತೆ ಸೂಚನೆ ನೀಡಿದರು.

     ಜಿಲ್ಲೆಯಲ್ಲಿ ಶಾಲಾ ಶೈಕ್ಷಣಿಕ ಗುಣಮಟ್ಟದ ಸುಧಾರಣೆಗೆ, ದಾಖಲಾತಿ ನಿರ್ವಹಣೆ ಹಾಗೂ ಶಾಲೆಯಿಂದ ಮಕ್ಕಳು ಹೊರಗೆ ಉಳಿಯದಂತೆ ನೋಡಿಕೊಳ್ಳಲು ಈಗಾಗಲೇ ಎಲ್ಲಾ ಶಾಲಾ ಮುಖ್ಯೋಪಾಧ್ಯಯರಿಗೆ ತರಬೇತಿ ನೀಡಲಾಗುತ್ತಿದೆ. ಅದರಂತೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿAದ ಹೆಚ್ಚಿನ ಶಿಕ್ಷಕರನ್ನು ಒದಗಿಸಲಾಗಿದೆ. ಕಾರಣ ಪ್ರತಿ ಮಾಹೆ ತಲಾ 10 ರಂತೆ ಅನಕ್ಷರಸ್ಥರನ್ನು ಗುರುತಿಸಿ ಸಾಕ್ಷರರÀನ್ನಾಗಿ ಮಾಡಲು  ವಿಶೇಷ ಗಮನ ನೀಡಬೇಕು. ಜಿಲ್ಲೆಯಲ್ಲಿ ಸದ್ಯ ಶೇ.51 ರಷ್ಟು ಸಾಕ್ಷರತಾ ಪ್ರಮಾಣ ಇದ್ದು, ಸರ್ಕಾರೇತರ ಸಂಘ ಸಂಸ್ಥೆಗಳು, ವಿದ್ಯಾರ್ಥಿಗಳ ಸಹಕಾರದೊಂದಿಗೆ ಸಾಕ್ಷರತಾ ಪ್ರಮಾಣ ಹೆಚ್ಚಿಸಲು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

     ಜಿಲ್ಲೆಯ ನೂತನ ತಾಲೂಕು ವಡಗೇರದಲ್ಲಿ ಪದವಿ ಪೂರ್ವ ಕಾಲೇಜು, ಶಾಲೆಗಳು ಹಾಗೂ ವಸತಿ ನಿಲಯಗಳು ಇರುವ ಬಗ್ಗೆ, ಹಾಗೂ ಅವಶಕತೆಗಳ ಬಗ್ಗೆ ವರದಿ ಸಲ್ಲಿಸುವಂತೆ ತಿಳಿಸಿದ ಅವರು ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ನಿಲಯಗಳ ಮಕ್ಕಳಿಗೆ ಮಾರ್ಗಸೂಚಿಯಂತೆ ಉಪಹಾರ, ಮೂಲ ಸೌಕರ್ಯಗಳ ಬಗ್ಗೆ ವ್ಯವಸ್ಥೆ ಕಲ್ಪಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

      ಜಿಲ್ಲೆಯಲ್ಲಿ ಹೊಬಳಿವಾರು ವಿಕಲಚೇತನರನ್ನು ಗುರುತಿಸಿ ಶಿಬಿರಗಳನ್ನು ಆಯೋಜಿಸುವ ಮೂಲಕ ಸಕಾಲಕ್ಕೆ ಅವರಿಗೆ ಸಾಧನ ಸಲಕರಣೆ ಒದಗಿಸಲು ಕ್ರಮ ಕೈಕೊಳ್ಳಬೇಕು. ಅನಿಮಿಯಾದಿಂದ ಬಳಲುತ್ತಿರುವ ಮಕ್ಕಳಿಗೆ ಹಳೆ ಜಿಲ್ಲಾ ಆಸ್ಪತ್ರೆಯ ರೆಡ್‌ಕ್ರಾಸ್ ಘಟಕ ವ್ಯಾಪ್ತಿಯಲ್ಲಿ ಬ್ಲೇಡ್‌ಬ್ಯಾಂಕ್ ಸದ್ಭಳಕೆ ಮಾಡಿಕೊಳ್ಳಬೇಕು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಐಸಿಡಿಎಸ್ ಕಾರ್ಯಕ್ರಮದಡಿ ಸೂಕ್ತ ಪ್ರಗತಿ ಸಾಧಿಸಬೇಕು. ತಾಲೂಕುವಾರು ಅಂಗನವಾಡಿ ಕಾರ್ಯಕರ್ತರ ತರಬೇತಿ ಕಾರ್ಯಗಳ ಬಗ್ಗೆ ಪರಿಶೀಲಿಸಬೇಕು. ಅದರಂತೆ ಅಂಗನವಾಡಿ ಕಾರ್ಯಕರ್ತರ ನೇಮಕಾತಿಗೆ ಸಂಬAಧಿಸಿದ ಸಾಪ್ಟ್ವೇರ್ ಸರಿಪಡಿಸಿ ನೇಮಕಾತಿಗೆ ಕೋರಲು ಸಭೆಯಲ್ಲಿ ತಿಳಿಸಿ ವಿವಿಧ ಸರಕಾರೇತರ ಸಂಘ ಸಂಸ್ಥೆಗಳ ಅನುದಾನ ಸಮರ್ಪಕ ವಿನಿಯೋಗವಾಗುವಂತೆ ನೋಡಿಕೊಳ್ಳಬೇಕು. ಬರಗಾಲ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಆಯಾ ತಹಸೀಲ್ದಾರರಿಗೆ, ತಾಲೂಕು ಪಂಚಾಯತ್ ಕಾರ್ಯನಿರ್ವಹಣ ಅಧಿಕಾರಿಗಳಿಗೆ, ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
 
     ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಗರಿಮಾ ಪನ್ವಾರ್ ಅವರು ಜಿಲ್ಲಾ ಅಜಿಮ್ ಪ್ರೇಮ್‌ಜೀ ಪ್ರೌಂಡೇಶನ್, ಟಾಟಾ ಕಲಿಕಾ ಸಂಸ್ಥೆ, ಎನ್‌ಜಿಓಗಳ ನೇರವಿನೊಂದಿಗೆ ವಿವಿಧ ಕಾರ್ಯಕ್ರಮ, ಕೌಶಲ್ಯ ಅಭಿವೃದ್ಧಿ ತರಬೇತಿ, ಮಾರ್ಗದರ್ಶನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು. ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.          

Google  News WhatsApp Telegram Facebook
HTML smaller font

.

.