ಹಿರಿಯ ನಾಗರಿಕರು ಕಾನೂನಿನ ಅರಿವು ನೆರವುವನ್ನು ಪಡೆದುಯುವು ಮುಖ್ಯ : ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಶ್ರೀ ರವೀಂದ್ರ ಎಲ್. ಹೊನೋಲೆ

Oct 11, 2023 - 19:35
 0  13

Google  News WhatsApp Telegram Facebook

ಹಿರಿಯ ನಾಗರಿಕರು ಕಾನೂನಿನ ಅರಿವು ನೆರವುವನ್ನು ಪಡೆದುಯುವು ಮುಖ್ಯ : ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಶ್ರೀ ರವೀಂದ್ರ ಎಲ್. ಹೊನೋಲೆ

Janaa Akrosha News Desk.

ಹಿರಿಯ ನಾಗರಿಕರು ಕಾನೂನಿನ ಅರಿವು ನೆರವುವನ್ನು ಪಡೆದುಯುವು ಮುಖ್ಯ : ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಶ್ರೀ ರವೀಂದ್ರ ಎಲ್. ಹೊನೋಲೆ

ಯಾದಗಿರಿ : ಅಕ್ಟೊಬರ್.11  : ಪೋಷಕರ ಹೆಸರಿನಲ್ಲಿದ್ದ ಮನೆ ಅಥವಾ ಆಸ್ತಿಯನ್ನು ಮಕ್ಕಳು ತಮ್ಮ ಹೆಸರಿಗೆ ಮಾಡಿಸಿಕೊಂಡು ಅಂತಹ ಪೋಷಕರನ್ನು ಮನೆಯಿಂದ ಹೊರ ಹಾಕಿದ್ದರೆ, ಮತ್ತೆ ಅದೇ ಆಸ್ತಿ ಮರಳಿ ಪೋಷಕರ ಹೆಸರಿಗೆ ನೀಡಲು ಕಾನೂನಿನಲ್ಲಿ ಅವಕಾಶವಿದೆ. ಹಿರಿಯ ನಾಗರಿಕರು ಕಾನೂನಿನ ಅರಿವು ಮತ್ತು ನೆರವುವನ್ನು ಪಡೆದುಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಗೌರವಾನ್ವಿತ ಶ್ರೀ ರವೀಂದ್ರ ಎಲ್. ಹೊನೋಲೆ ಅವರು ಹೇಳಿದರು.

      ನಗರದ ಹಿಂದಿ ಪ್ರಚಾರ ಸಭಾ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಯಾದಗಿರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ನಿವೃತ್ತ ನೌಕರರ ಸಂಘ ಯಾದಗಿರಿ ಇವರುಗಳ ಸಂಯುಕ್ತಾಶ್ರಯದಲ್ಲಿ “ವಿಶ್ವ ಹಿರಿಯ ನಾಗರಿಕರ ದಿನಾಚರಣೆ" ಅಂಗವಾಗಿ ಕಾನೂನು ಅರಿವು-ನೆರವು ಕಾರ್ಯಕ್ರಮಕ್ಕೆ ಸಸಿಗೆ ನೀರುಣಿಸಿ, ಉದ್ಘಾಟಿಸಿ ಅವರು ಮಾತನಾಡಿದರು.

      ಪ್ರಸ್ತುತ ದಿನಗಳಲ್ಲಿ ಹಿರಿಯ ನಾಗರಿಕರು ಹೆಚ್ಚಿನ ನಿರ್ಲಕ್ಷö್ಯಕ್ಕೆ ಒಳಗಾಗುತ್ತಿದ್ದಾರೆ. ಅವರಿಗೆ ಆರ್ಥಿಕ ಭದ್ರತೆ ಹಾಗೂ ಸಾಮಾಜಿಕ ರಕ್ಷಣೆ ನೀಡುವತ್ತ ಗಮನ ಅರಿಸಬೇಕು. ಹಿರಿಯ ನಾಗರಿಕ ರಕ್ಷಣೆಗಾಗಿ ಗೌರವಾನ್ವಿತ ಉಚ್ಚ ನ್ಯಾಯಾಮುರ್ತಿಗಳು ಹಿರಿಯ ನಾಗರಿಕ ಸಂರಕ್ಷಣೆಗಾಗಿ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದರು.

      ಸಹಾಯಕ ಆಯುಕ್ತರಾದ ಹಂಪಣ್ಣ ಸಜ್ಜನ್ ಅವರು ಮಾತನಾಡಿ, ಮಕ್ಕಳಿಂದ ನಿರ್ಲಕ್ಷö್ಯಕ್ಕೆ ಒಳಾಗಾಗುವ ಹಿರಿಯ ನಾಗರಿಕರು ನೇರವಾಗಿ ಸಹಾಯಕ ಆಯುಕ್ತರಿಗೆಗೆ ದೂರು ನೀಡಬಹುದು. ನ್ಯಾಯಾಲಯಕ್ಕೆ ಹೋಗುವ ಅಗತ್ಯವಿರುವುದಿಲ್ಲ. ಪ್ರಸ್ತುತ ದಿನಗಳಲ್ಲಿ ಹಿರಿಯರ ಮಾರ್ಗದರ್ಶನ, ಬುದ್ದಿವಾದ ಮಾತುಗಳು ಕೇಳಿಬರುತ್ತಿಲ್ಲ, ಹಿರಿಯರು ತಮ್ಮ ಮಕ್ಕಳಿಗೆ ಮಾನವೀಯ ಮೌಲ್ಯಗಳ ಕುರಿತು ತಿಳಿ ಹೇಳಬೇಕು ಎಂದು ತಿಳಿಸಿದರು.

      ವಕೀಲರ ಸಂಘದ ಜಿಲ್ಲಾಧ್ಯಕ್ಷರಾದ ಸಿ.ಎಸ್. ಮಾಲಿ ಪಾಟೀಲ್ ಅವರು ಮಾತನಾಡಿ, ಹಿರಿಯ ನಾಗರಿಕರ ಕುಂದು ಕೊರತೆಗಳು ಸಾಕಷ್ಟಿವೆ. ಸಂಸ್ಕೃತಿ-ಸAಪ್ರಾಯದಾಯಗಳಿಗೆ ಹೆಚ್ಚು ಬೆಲೆ ಕೊಡುವ ನಮ್ಮ ದೇಶದಲ್ಲಿ ಹಿರಿಯ ನಾಗರಿಕರನ್ನು ನಿರ್ಲಕ್ಷಿಸುವ ಮನೋಭಾವ ಇರಬಾರದು. ಅನುಭವವಿರುವ ಹಿರಿಯ ನಾಗರಿಕರ ಮಾರ್ಗದರ್ಶನ ನಮಗೆ ಬೇಕಾಗುತ್ತದೆ. ಅವರ ಗೌರವಕ್ಕೆ ಧಕ್ಕೆ ಬಾರಂದತೆ ನೋಡಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ನುಡಿದರು.

      ಅಂಗವಿಕಲರ ಕಲ್ಯಾಣಾಧಿಕಾರಿ ವಿಶ್ವನಾಥರೆಡ್ಡಿ ಅಬ್ಬೆತುಮಕೂರು ಅವರು ಮಾತನಾಡಿ, ಹಿರಿಯ ನಾಗರಿಕರಿಗೆ ಸರ್ಕಾರದಿಂದ ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ ಸೇರಿದಂತೆ ಹಲವು ಯೋಜನೆಗಳು ಜಾರಿಯಲ್ಲಿವೆ, ಅವುಗಳನ್ನು ಎಲ್ಲಾ ಹಿರಿಯರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.

      ವಕೀಲರಾದ ಬಿ.ಜಿ. ಪಾಟೀಲ್ ಅವರು ಮಾತನಾಡಿ, ಹಿರಿಯ ನಾಗರಿಕರ ರಕ್ಷಣಾ ಕಾಯ್ದೆಯಡಿ ಸರ್ಕಾರ ಅವರಿಗೆ ಬಸ್ಸಿನಲ್ಲಿ ರಿಯಾಯಿತಿ ದರದಲ್ಲಿ ಪ್ರಮಾಣ, ಬಸ್‌ಗಳಲ್ಲಿ ಪ್ರತ್ಯೇಕ ಆಸನ ಮೀಸಲು ವ್ಯವಸ್ಥೆ ಸೇರಿದಂತೆ ಹಲವಾರು ಸೌಲಭ್ಯಗಳನ್ನು ಕಲ್ಪಿಸಿದೆ. ಪುಸ್ತಕಗಳನ್ನು ಒದುವ ಮೂಲಕ, ಜೀವನದ ಮೌಲ್ಯಗಳನ್ನು ಅರ್ಥೈಸಿಕೊಳ್ಳುವ ಮೂಲಕ ಕಿರಿಯರಿಗೆ ಮಾರ್ಗದರ್ಶರಾಗಬೇಕು ಎಂದು ತಿಳಿಸಿದರು.

     ಈ ಸಂದರ್ಭದಲ್ಲಿ ಶರಣಪ್ಪ, ಶಂಕರ ಸೋನಾರ, ರಾಮಯ್ಯ ಶಾಹಾದಿ, ಅಜಿತ್ ಜೇನ್, ಶ್ರೀಮತಿ ವೀಣಾ, ನಾಗಮ್ಮ ಜಕಾತಿ ಹಾಗೂ ನಿವೃತ್ತ ನೌಕರರು, ಹಿರಿಯನಾಗರಿಕರು, ಅಧಿಕಾರಿಗಳು ಉಪಸ್ಥಿತರಿದ್ದರು.

Google  News WhatsApp Telegram Facebook
HTML smaller font

.

.