ಜನರು ಕಳಂಕ, ತಾರತಮ್ಯ ನಿಲ್ಲಿಸಿ, ತಡೆಗಟ್ಟುವಿಕೆಯನ್ನು ಬಲಪಡಿಸಿ

Jul 4, 2023 - 17:04
 0  17

Google  News WhatsApp Telegram Facebook

ಜನರು ಕಳಂಕ, ತಾರತಮ್ಯ ನಿಲ್ಲಿಸಿ, ತಡೆಗಟ್ಟುವಿಕೆಯನ್ನು ಬಲಪಡಿಸಿ

Janaa Akrosha News Desk.

ಯಾದಗಿರಿ : ಜುಲೈ 04,  : ಜನರು ಮಾದಕ ವಸ್ತುಗಳಿಂದ ದೂರವಿದ್ದು, ಕಾರಾಗೃಹದಲ್ಲಿ ಸುಧಾರಣೆ ಹೊಂದಿ ಒಳ್ಳೆಯ ಜೀವನವನ್ನು ನಡೆಸಲು ಎಂದು ಯಾದಗಿರಿ ಜಿಲ್ಲಾ ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ನಂಜುAಡಯ್ಯ ಅವರು ಸಲಹೆ ನೀಡಿದರು.
     
     ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾರಾಗೃಹ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ ಯಾದಗಿರಿ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

     ಯಾದಗಿರಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀ ರವೀಂದ್ರ ಎಲ್.ಹೊನೋಲೆ ಅವರು ಪ್ರತಿಜ್ಞಾವಿಧಿ ಬೋದಿಸಿ ಮಾತನಾಡಿದ ಅವರು, ಇಂದಿನ ಯುವಕರು ಮಾದಕ ವಸ್ತುಗಳಿಗೆ ದಾಸರಾಗಿ ಅವರ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಆದ್ದರಿಂದ ಮಾದಕ ವಸ್ತುಗಳ ಸೇವನೆಯಿಂದ ಯುವಕರು ದೂರವಿರಬೇಕು ಎಂದು ಅವರು ತಿಳಿಸಿದರು.
 
     ಮುಖ್ಯ ಅತಿಥಿಯಾಗಿ ಆಗಮಿಸಿದ ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗದ ಮನೋವೈದ್ಯರಾದ ಡಾ.ಅಮೀತ ಕುಮಾರ ಮಾತನಾಡಿ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಟರಿಣಾಮಗಳ ಬಗ್ಗೆ ಹಾಗೂ ಮಾನಸಿಕ ಸಮಸ್ಯೆಗಳ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು.
     
     ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಯಾದಗಿರಿ ಜಿಲ್ಲಾ ಕಾರಾಗೃಹ ಅಧೀಕ್ಷಕರು ಜಿ.ಎಸ್ ರಾಠೋಡ್, ಯಾದಗಿರಿ ಉಪ ಪ್ರಧಾನ ಕಾನೂನು ನೆರವು ಅಭಿರಕ್ಷಕರು ಶ್ರೀ ಕೆ.ಅಬ್ದುಲ್ ರಜಾಕ, ಸಹಾಯಕ ಕಾನೂನು ನೆರವು ಅಭಿರಕ್ಷಕರು ಶ್ರೀ ಮಲ್ಲಿಕಾರ್ಜುನ ಮನಗನಾಳ, ಜಿಲ್ಲಾ ಕಾರಾಗೃಹದ ಸಿಬ್ಬಂದಿಗಳು, ಜಿಲ್ಲಾ ಮಾನಸಿಕ ಆರೋಗ್ಯ ಎಲ್ಲಾ ಸಿಬ್ಬಂದಿಗಳು, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

     ಮಲ್ಲಿಕಾರ್ಜುನ ಮ್ಯಾಗೇರಿ ನಿರೂಪಸಿದರು. ರೇವಣಸಿದ್ದಯ್ಯ ಸ್ವಾಗತಿಸಿದರು, ಗೌಡಪ್ಪ ವಂದಿಸಿದರು  

Google  News WhatsApp Telegram Facebook
HTML smaller font

.

.