ಸಾರ್ವಜನಿಕ ಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ, ನಗರದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ.  ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆ

Sep 1, 2023 - 19:01
 0  22

Google  News WhatsApp Telegram Facebook

ಸಾರ್ವಜನಿಕ ಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ, ನಗರದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ.  ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆ

Janaa Akrosha News Desk.

ಸಾರ್ವಜನಿಕ ಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ, ನಗರದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ.
 ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆ


ಯಾದಗಿರಿ: ಸೆಪ್ಟೆಂಬರ್, 01 : ಸಾರ್ವಜನಿಕ ಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ, ಜಿಲ್ಲೆಯ ಎಲ್ಲಾ ನಗರ ಮತ್ತು ಪಟ್ಟಣಗಳ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ ವೈಜ್ಞಾನಿಕ ಘನತ್ಯಾಜ್ಯ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ಎಂದು  ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ನಡೆದ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯ  ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಕಾಲ ಯೋಜನೆಯಡಿ ನಗರ ಸ್ಥಳೀಯ ಸಂಸ್ಥೆಗಳಿಗೆ ಸ್ವೀಕೃತವಾಗುವ ಅರ್ಜಿಗಳನ್ನು ನಿಗದಿತ ಕಾಲಾವಧಿಯಲ್ಲಿ ವಿಲೇವಾರಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ನಗರೋತ್ಥಾನ ಹಂತ- 3 ಮತ್ತು 4 ಯೋಜನೆಯ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಕಟ್ಟುನಿಟ್ಟಾಗಿ ಸೂಚಿಸಿ ಗುಣಮಟ್ಟದ ಕಾಮಗಾರಿಗಳನ್ನು ನಿರ್ವಹಿಸಬೇಕು. ಸಂಬಂಧಿಸಿದ ಅಧಿಕಾರಿಗಳು ಪ್ರಾರಂಭವಾಗಿರದ ಕಾಮಗಾರಿಗಳನ್ನು ಪರಿಶೀಲಿಸಿ ತುರ್ತಾಗಿ ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು. ಈ ಯೋಜನೆಯಡಿ ವ್ಯಯಕ್ತಿಕ ಕಾರ್ಯಕ್ರಮಗಳ ಕುರಿತು ಫಲಾನುಭವಿಗಳ ಪಟ್ಟಿಯನ್ನು ನಿಯಮಾನುಸಾರ ತಯಾರಿಸಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

 ನಗರದ ವ್ಯಾಪ್ತಿಯಲ್ಲಿ ನೈರ್ಮಲ್ಯ ಕಾಪಾಡುವ ನಿಟ್ಟಿನಲ್ಲಿ  ಸಮರ್ಪಕ ಘನತ್ಯಾಜ್ಯ ನಿರ್ವಹಣೆಗೆ ಹೆಚ್ಚಿನ ಒತ್ತು ನೀಡಿ, ಸಾರ್ವಜನಿಕರು ಮನೆಯಲ್ಲಿ ಹಸಿ ಕಸ-ಒಣ ಕಸವನ್ನು ಬೇರ್ಪಡಿಸಿ ಕಸವನ್ನು ಎಲ್ಲೆಂದರಲ್ಲಿ ಎಸೆಯುವ ಬದಲು ನಗರ ಸ್ಥಳೀಯ ಸಂಸ್ಥೆಗಳ ಕಸದ ವಾಹನಗಳಲ್ಲಿ ಹಾಕಬೇಕು; ನಗರ ಸ್ಥಳೀಯ ಸಂಸ್ಥೆಗಳು ಕರಪತ್ರ, ಭಿತ್ತಿಪತ್ರ,  ಜಾಗೃತಿ ಜಾಥಾ, ಡಂಗುರ ಮುಂತಾದವುಗಳ ಮೂಲಕ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸುವ ಕಾರ್ಯವನ್ನು ಹೆಚ್ಚು ಮಾಡಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ನಗರ ಸ್ಥಳೀಯ ಸಂಸ್ಥೆಗಳ ನಗರೋತ್ಥಾನ ಯೋಜನೆ, ಘನತ್ಯಾಜ್ಯ ನಿರ್ವಹಣೆ, 24*7 ಕುಡಿಯುವ ನೀರು ಸರಬರಾಜು, ಯುಜಿಡಿ ಸೇರಿದಂತೆ ವಿವಿಧ ಯೋಜನೆಗಳ ಪ್ರಸ್ತುತ ಸ್ಥಿತಿಗತಿ ವರದಿಗಳ ಕುರಿತು ಮಾಹಿತಿ ಪಡೆದ ಜಿಲ್ಲಾಧಿಕಾರಿಯು ಹಲವು ಸಲಹೆಗಳನ್ನು  ಅಧಿಕಾರಿಗಳಿಗೆ ನೀಡಿದರು.

 ಎಲ್ಲಾ ಪೌರ ಕಾರ್ಮಿಕರಿಗೆ ಸಮವಸ್ತ್ರ, ಕೈಗವಚ, ಶೂ ಇನ್ನಿತರ ಕೆಲಸಕ್ಕೆ ಬೇಕಾದ ಸಾಮಾಗ್ರಿಗಳು ಒದಗಿಸಿ ಕಾಲಕಾಲಕ್ಕೆ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಹಮ್ಮಿಕೊಳ್ಳುವ ಮೂಲಕ ಪೌರ ಕಾರ್ಮಿಕರಿಗೆ ಸೌಲಭ್ಯ ಒದಗಿಸುವಂತೆ ಸೂಚಿಸಿದರು

ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಮತ್ತು ಪ್ರಭಾರ ಪೌರಾಯುಕ್ತರಾದ ಹಂಪಣ್ಣ ಸಜ್ಜನ್,   ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಲಕ್ಷ್ಮೀಕಾಂತ , ಕಾರ್ಯಪಾಲಕ ಅಭಿಯಂತರ ಮಹೇಶ್ವರ ಸುಲೆಗಾವ್,  ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಹಾಗೂ ಅಭಿಯಂತರರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Google  News WhatsApp Telegram Facebook
HTML smaller font

.

.