ತಾಲೂಕ ಮಟ್ಟದ ವಿಪತ್ತು ನಿರ್ವಹಣಾ ಸಮಿತಿ ಸಭೆ ವಿಪತ್ತು ನಿರ್ವಹಣೆ ಮಾಡಲು ಸಂಘಟಿತರಾಗಿ ಕೆಲಸ ಮಾಡಿ ತಹಶಿಲ್ದಾರ: ಶ್ರೀ ಉಮಾಕಾಂತ ಹಳ್ಳೆ

Jul 27, 2023 - 07:41
Jul 27, 2023 - 07:58
 0  45

Google  News WhatsApp Telegram Facebook

ತಾಲೂಕ ಮಟ್ಟದ ವಿಪತ್ತು ನಿರ್ವಹಣಾ ಸಮಿತಿ ಸಭೆ ವಿಪತ್ತು ನಿರ್ವಹಣೆ ಮಾಡಲು ಸಂಘಟಿತರಾಗಿ ಕೆಲಸ ಮಾಡಿ ತಹಶಿಲ್ದಾರ: ಶ್ರೀ ಉಮಾಕಾಂತ ಹಳ್ಳೆ

Janaa Akrosha News Desk.

ಶಹಾಪುರ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸಂಭವಿಸುವ ಪ್ರಾಕೃತಿಕ ವಿಪತ್ತುಗಳನ್ನು ಎದುರಿಸಲು ತಾಲೂಕಿನ ಎಲ್ಲ ಇಲಾಖೆಯ ಅಧಿಕಾರಿಗಳು ಸಂಘಟಿತರಾಗಿ ಕೆಲಸ ಮಾಡಬೇಕು ಎಂದು ಶಹಾಪುರ ತಾಲೂಕು ತಹಶಿಲ್ದಾರ ಶ್ರೀ ಉಮಾಕಾಂತ ಹಳ್ಳೆ ಅವರು ಹೇಳಿದರು.

ತಾಲೂಕ ಆಡಳಿತ ಹಾಗೂ ತಾಲೂಕ ಪಂಚಾಯತ ಇವರ ಸಹಯೋಗದಲ್ಲಿ ಜು.೨೬ರಂದು ಶಹಾಪೂರ ತಾಲೂಕ ಪಂಚಾಯತ ಸಭಾಂಗಣದಲ್ಲಿ ನಡೆದ ತಾಲೂಕ ವಿಪತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.

ಹವಾಮಾನ ಇಲಾಖೆ ವರದಿ ಪ್ರಕಾರ ಮುಂದಿನ ದಿನಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಜಿಲ್ಲೆಯನ್ನು ಎಲ್ಲೊ ಹಾಗೂ ರೆಡ್ ಜೂನ್‌ನಲ್ಲಿ ಗುರುತಿಸಿದ್ದು, ಮಳೆಯಿಂದ ಸಂಭವಿಸುವ ವಿಪತ್ತುಗಳನ್ನು ಎದುರಿಸಲು ತಾಲೂಕ ಆಡಳಿತ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಅಧಿಕಾರಿಗಳು ಸಮರೋಪಾದಿಯಲ್ಲಿ ಕೆಲಸ ಮಾಡಬೇಕಿದೆ ನಗರ ಹಾಗೂ ಗ್ರಾಮೀಣ ಪ್ರದೇಶದ ಜನ, ಜಾನುವಾರುಗಳ ಜೀವ ಹಾನಿಯಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಎನ್‌ಡಿಆರ್‌ಎಫ್ ನಿಯಮದ ಪ್ರಕಾರ ಜನ, ಜಾನುವಾರುಗಳು, ಮನೆ ಹಾಗೂ ಬೆಳೆ ಹಾನಿಗೆ ಸಂಬAದಿಸಿದAತೆ ಸಂತ್ರಸ್ತರಿಗೆ ಹಾನಿ ಸಂಭವಿಸಿದ ೨೪ ಗಂಟೆಗಳಲ್ಲಿ ಸೂಕ್ತ ಪರಿಹಾರ ವಿತರಣೆ ಮಾಡಬೇಕಿದೆ. ಆದರೆ, ಸಂಭವಿಸಿದ ಹಾನಿಯ ಕುರಿತು ಸಮಿಕ್ಷೆ ಮಾಡಲು ರಚಿಸಿದ ಗ್ರಾಮ ಆಡಳಿತಾಧಿಕಾರಿ ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಜಂಟಿ ತಂಡವು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ವಿಳಂಬ ಮಾಡದೆ ಕಾಲಮಿತಿಯಲ್ಲಿ ನಿಖರವಾದ ವರದಿ ನೀಡಿದರೆ, ಪರಿಹಾರ ವಿತರಣೆ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.

೧೫೦ಎಮ್‌ಎಮ್ ಮಳೆ ಸುರಿಯುವ ಸಂಭವದ ಹಿನ್ನಲೆ ತಾಲೂಕ ಮಟ್ಟದ ಎಲ್ಲ ಇಲಾಖೆಯ ಅಧಿಕಾರಿಗಳು, ತಮ್ಮ ಮೇಲಾಧಿಕಾರಿಗಳ ಅನುಮತಿ ಇಲ್ಲದೆ, ಕೇಂದ್ರ ಸ್ಥಾನ ಬಿಡುವಂತಿಲ್ಲ ಹಾಗೂ ಎಲ್ಲ ಅಧಿಕಾರಿಗಳು ತಮ್ಮ ದೂರವಾಣಿ ಸಂಖ್ಯೆಯನ್ನು ಸ್ಥಗಿತಗೊಳಿಸದೆ ಸಕ್ರಿಯವಾಗಿರಿಸಿಕೊಳ್ಳಬೇಕು ಎಂದ ಅವರು, ಗ್ರಾಮದಲ್ಲಿನ ಚರಂಡಿ, ನಾಲೆಗಳಲ್ಲಿ ನೀರು ನಿಲ್ಲದಂತೆ ಹಾಗೂ ಮಳೆ ನೀರು ಸರಾಗವಾಗಿ ಹರಿದು ಹೊಗುವಂತೆ ಸ್ವಚ್ಛಗೊಳಿಸಿ, ಕಲುಷಿತ ನೀರು ಕುಡಿಯುವ ನೀರಿನೊಂದಿಗೆ ಸೇರಿದಂತೆ ಜಾಗ್ರತೆ ವಹಿಸಿ ಎಂದು ಹೇಳಿದರು.

ಶಹಾಪೂರ ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಸೋಮಶೇಖರ ಬಿರಾದಾರ ಅವರು ಮಾತನಾಡಿ, ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ತಾಲೂಕಿನಲ್ಲಿ ಹರಿದು ಹೊಗುವ ಕೃಷ್ಣಾ ಹಾಗೂ ಭೀಮಾ ನದಿಗಳಿಗೆ ಜಲಾಶಯಗಳಿಂದ ಹೆಚ್ಚಿನ ಪ್ರಮಾಣದ ನೀರನ್ನು ನದಿಗಳಿಗೆ ಹರಿಬಿಡಲಾಗುತ್ತಿದ್ದು, ನದಿದಡ ಗ್ರಾಮಗಳಲ್ಲಿನ ಜನರು ಹಾಗೂ ಜಾನುವಾರುಗಳು ನದಿ ಪಾತ್ರಕ್ಕೆ ತೆರಳದಂತೆ ಗ್ರಾಮದಲ್ಲಿ ಡಂಗೂರ ಸಾರಿ ಗ್ರಾಮಸ್ಥರಿಗೆ ನದಿ ನೀರಿನ ಒಳಹರಿವಿನ ಕುರಿತು ಜಾಗೃತಿ ಮೂಡಿಸಿ ಜನರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಕ್ತ ವ್ಯವಸ್ಥೆ ಮಾಡಿ ಎಂದು ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದರು. 

ನದಿಗಳ ಪ್ರವಾಹದಿಂದ ನದಿಗಳಂಚಿನ ಗ್ರಾಮದ ಜನರನ್ನು ರಕ್ಷಿಸಲು ಹಾಗೂ ಮಳೆಯಿಂದಾಗಿ ಮನೆಗಳು ಬಿಳುವ ಸ್ಥಿತಿಯಲ್ಲಿದ್ದರೆ, ಅಂತಹ ಮನೆಯ ಜನರನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಲು ಮುಂಜಾಗ್ರತಾ ಕ್ರಮವಾಗಿ ಗಂಜಿ ಕೇಂದ್ರಗಳ ಸ್ಥಳಗಳನ್ನು ಗುರುತಿಸಿ, ಅಗತ್ಯ ಮೂಲ ಸೌಲಭ್ಯಗಳು ಇರುವ ಕುರಿತು ಖಚಿತಪಡಿಸಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಮಳೆಗಾಲದಲ್ಲಿ ತಗ್ಗು-ಗುಂಡಿ ಹಾಗೂ ಚರಂಡಿಗಳಲ್ಲಿ ಮಳೆ ನೀರು ನಿಂತು, ಸೋಳ್ಳೆಗಳು ಉತ್ಪತ್ತಿಯಾಗಿ, ಜನರಿಗೆ ಹಾಗೂ ಜಾನುವಾರುಗಳಿಗೆ ಕಚ್ಚುವದರಿಂದ ಗ್ರಾಮೀಣ ಪ್ರದೇಶದಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಇರುವದರಿಂದ ಜನರ ಆರೋಗ್ಯದ ಹಿತದೃಷ್ಠಿಯಿಂದ ಆಟೋ ಪ್ರಚಾರದ ಮೂಲಕ ಗ್ರಾಮದ ಜನರಲ್ಲಿ ರೋಗ್ಯದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ಈ ವೇಳೆ ಸಹಾಯಕ ನಿರ್ದೇಶಕ ಭೀಮರಾಯ ಬಿರಾದಾರ, ವಿಷಯ ನಿರ್ವಾಹಕ ಅಜೀತ ಕುಮಾರ, ತಾಲೂಕ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ತಾಲೂಕಿನ ಎಲ್ಲ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಭಾಗವಹಿಸಿದ್ದರು.

Google  News WhatsApp Telegram Facebook
HTML smaller font

.

.