ಅಪರಾಧ

ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನ ಮೇಲೆ ಪ್ರಕರಣ ದಾಖಲು

WhatsApp Group Join Now
Telegram Group Join Now

ಶಿವಮೊಗ್ಗ, 7 ಏಪ್ರಿಲ್ : ಮಾಜಿ ಸಚಿವ, ಬಿಜೆಪಿ ಬಂಡಾಯ ನಾಯಕ ಕೆ.ಎಸ್.ಈಶ್ವರಪ್ಪ ವಿರುದ್ದ ಚುನಾವಣಾಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.

ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದು, ಈ ವೇಳೆ ಚುನಾವಣಾಧಿಕಾರಿಗಳ ಕಚೇರಿಯಿಂದ ಯಾವುದೇ ರೀತಿಯ ಅನುಮತಿ ಪಡೆಯದೆ ರಾಜಕೀಯ ಸಭೆ ನಡೆಸಿ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಆರೋಪದಡಿ ಈ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ನೊಣಬೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಅಂಬುತೀರ್ಥದ ದೇವಸ್ಥಾನ ಒಂದರಲ್ಲಿ ಶನಿವಾರ ಪೂಜಾ ಕಾರ್ಯಕ್ರಮ ನೆರವೇರಿಸಿ, ಅಲ್ಲೇ ಹತ್ತಿರದಲ್ಲಿದ್ದ ಅರ್ಚಕರ ಮನೆಗೆ ಹೋಗಿದ್ದಾರೆ. ಅವರ ಮನೆಯ ಅಂಗಳದಲ್ಲಿ ಸುಮಾರು 50 ರಿಂದ 60 ಜನರನ್ನು ಸೇರಿಸಿಕೊಂಡು 50 ಕುರ್ಚಿಗಳು ಹಾಗೂ ಹ್ಯಾಂಡ್ ಮೈಕ್ ಒಳಗೊಂಡಂತೆ ಸಣ್ಣ ವೇದಿಕೆ ರೀತಿಯಲ್ಲಿ ಸಭೆ ನಡೆಸಿ ರಾಜಕೀಯ ಪ್ರೇರಿತ ಭಾಷಣವನ್ನು ಮಾಡಿದ್ದಾರೆ.

WhatsApp Group Join Now
Telegram Group Join Now

Related Posts