ಶಿಕ್ಷಣ

ಯಾವುದೇ ಪಾಲಕರು ಮಕ್ಕಳನ್ನು ದುಡಿಮೆಗೆ ಕಳುಹಿಸದೇ ಶಾಲೆಗೆ ಕಳುಹಿಸಬೇಕು ಕಾನೂನು ಅರಿವು-ನೆರವು ಜಾಗೃತಿ ಕಾರ್ಯಕ್ರಮ

WhatsApp Group Join Now
Telegram Group Join Now

ಯಾದಗಿರಿ : ಫೆಬ್ರವರಿ 23, : ಯಾವುದೇ ಪಾಲಕರು ಮಕ್ಕಳನ್ನು ದುಡಿಮೆಗೆ ಕಳುಹಿಸದೇ ಶಾಲೆಗೆ ಕಳುಹಿಸಬೇಕು, ಕಾನೂನು ಅರಿವು-ನೆರವು ಮತ್ತು ಜಾಗೃತಿ ಕುರಿತು, ಸರಕಾರಿ ಪ್ರೌಢ ಶಾಲೆಯ ಮುಖ್ಯ ಗುರುಗಳಾದ ಶ್ರೀಮತಿ ಮಂಜುಳಾ ಜೆನ್ನೂರು ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಜಿಲ್ಲಾಡಳಿತ, ಯಾದಗಿರಿ ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ ಹಾಗೂ ಯಾದಗಿರಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ವತಿಯಿಂದ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಎಲ್ಹೇರಿಯಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿ ನಿಷೇಧ ಮತ್ತು ನಿಯಂತ್ರಣ ಕಾಯ್ದೆ 1986 ತಿದ್ದುಪಡಿ ಕಾಯ್ದೆ 2016ರ ಕುರಿತು ಆಯೋಜಿಸಲಾಯಿತು.

ಮಕ್ಕಳನ್ನು ಶಾಲೆ ಬಿಡಿಸಿ ಕೆಲಸಕ್ಕೆ ಕಳುಹಿಸುವುದು ಅಪರಾಧವಾಗಿದ್ದು, ಯಾವುದೇ ಪಾಲಕರು ಮಕ್ಕಳನ್ನು ದುಡಿಮೆಗೆ ಕಳುಹಿಸದೇ ಶಾಲೆಗೆ ಕಳುಹಿಸಬೇಕು ಎಂದರು.

ನಿರಂತರವಾಗಿ ನಮ್ಮ ಶಾಲೆಯ ಮಕ್ಕಳಿಗೆ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿಯ ಬಗ್ಗೆ ಕಾನೂನು ಅರಿವು-ನೆರವು ಜಾಗೃತಿ ಮೂಡಿಸುತ್ತಿರುವ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ನಿರ್ಮೂಲನಾ ಸೊಸೈಟಿಯವರಿಗೆ ಧನ್ಯವಾದಗಳನ್ನು ಸಹ ತಿಳಿಸಿದರು.

ಯಾದಗಿರಿ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ನಿರ್ದೇಶಕರು ಶ್ರೀ ರಿಯಾಜ್ ಪಟೇಲ್ ಅವರು ಮಾತನಾಡಿ, ಬಾಲಕಾರ್ಮಿಕ ಮತ್ತು ಕೀಶೋರ ಕಾರ್ಮಿಕ ಮಕ್ಕಳನ್ನು ಕೆಲಸಕ್ಕೆ ಇಟ್ಟುಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವವರ ವಿರುದ್ಧ 6 ತಿಂಗಳಿAದ 2 ವರ್ಷ ಅಥವಾ 20,000 ರೂ. ರಿಂದ 50,000 ರೂ.ಗಳ ವರೆಗೆ ದಂಡ ಅಥವಾ ಎರಡನ್ನು ಸಹ ದಾಖಲಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರುಗಳಾದ ಶ್ರೀ ಪರಸಪ್ಪ ಸೈದಪ್ಪಗೋಳ್, ಗುರುಮಠಕಲ್ ತಾಲ್ಲೂಕಿನ ಕಾರ್ಮಿಕ ನಿರೀಕ್ಷಕರಾದ ಶ್ರೀಮತಿ ಸಂಗೀತಾ ಹೊನ್ನೂರು, ಕಾರ್ಮಿಕ ಇಲಾಖೆಯ ಡಿ.ಇ.ಓ ಅಂಬರೀಶ್, ಶಾಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

WhatsApp Group Join Now
Telegram Group Join Now

Related Posts