ಕ್ರೀಡೆ

ಕನ್ನಡಿಗರ ಆಶಿರ್ವಾದ ಆಶಿಸಿದ ದೊಡ್ಡ ಗಣೇಶ್

WhatsApp Group Join Now
Telegram Group Join Now

ಬೆಂಗಳೂರು, 5 ಏಪ್ರಿಲ್ :ದಿನದಿಂದ ದಿನಕ್ಕೆ ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಾವು ಏರುತ್ತಿದೆ. ಈ ನಡುವೆ ಚುನಾವಣೆಗೆ ಸ್ಪರ್ಧಿಸುತ್ತಿರೋ ಅಭ್ಯರ್ಥಿಗಳು ಮತಪ್ರಚಾರದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿಗೆ ಬೆಂಬಲ ನೀಡಿದ್ದ ಸುಮಲತಾ ಅಂಬರೀಶ್ ಅವರು ಇದೀಗ ಬಿಜೆಪಿ ಪಾಳಯಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಕಚೇರಿಯಲ್ಲಿಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಪಕ್ಷ ಸೇರಿದ್ದಾರೆ. ಸುಮಲತಾ ಅಂಬರೀಶ್ ಅವರ ಜೊತೆಗೆ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಸೇರಿದಂತೆ ಇಂದು ಕೆಲ ಪ್ರಮುಖ ನಾಯಕರು ಬಿಜೆಪಿ ಪಕ್ಷ ಸೇರಿದ್ದಾರೆ.

ಭಾರತದ ಮಾಜಿ ಕ್ರಿಕೆಟಿಗ, ಬಿಗ್ಬಾಸ್ ಸೀಸನ್ 4ರ ಮಾಜಿ ಸ್ಪರ್ಧೆ ದೊಡ್ಡ ಗಣೇಶ ಅವರು ಕೂಡ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಹೌದು, ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ಸಮ್ಮುಖದಲ್ಲಿ ಭಾರತದ ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ ಅವರು ಬಿಜೆಪಿ ಸೇರಿದರು.

ಈ ಬಗ್ಗೆ ಸಾಮಾಜಿಕ ಜಾಲತಾಣದವಾದ X ಖಾತೆಯಲ್ಲಿ ದೊಡ್ಡ ಗಣೇಶ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಇಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ ವೈ ಯಡಿಯೂರಪ್ಪನವರ ಸಮ್ಮುಖದಲ್ಲಿ ಇಂದು ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರಿಕೊಂಡೆ. ಕನ್ನಡಿಗರ ಆಶೀರ್ವಾದ ನನ್ನ ಮೇಲೆ ಹೀಗೆ ಇರಲಿ ಎಂದು ಬಯಸುತ್ತೇನೆ ಅಂತಾ ಬರೆದುಕೊಂಡಿದ್ದಾರೆ.

WhatsApp Group Join Now
Telegram Group Join Now

Related Posts

No Content Available