ಯಾದಗಿರಿ : ಜುಲೈ 24, :ಜಿಲ್ಲಾ ಪಂಚಾಯತ ವ್ಯಾಪ್ತಿಯ ವಿವಿಧ ಇಲಾಖೆಗಳು, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಸಮರ್ಪಕ ಅನುದಾನ ಹಂಚಿಕೆ ಬಳಕೆ ಮತ್ತು ಸಮಸ್ಯೆಗಳಿಗೆ ಸಂಬAಧಪಟ್ಟAತೆ ಸಲಹೆ ಸೂಚನೆಗಳನ್ನು ಪಡೆದು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುತ್ತದೆ ಎಂದು ರಾಜ್ಯ ಐದನೇ ಹಣಕಾಸು ಆಯೋಗದ ಅಧ್ಯಕ್ಷರಾದ ಡಾ.ಸಿ ನಾರಾಯಣಸ್ವಾಮಿ ಅವರು ಹೇಳಿದರು.
ಅನಿರ್ಬಂಧಿತ ಅನುದಾನದ ಕುರಿತು ನಿಮಗೆ ಮಾಹಿತಿ ಇರಲಿ:https://rzp.io/l/uj2sOh7nO5
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಐದನೇ ಹಣಕಾಸು ಆಯೋಗದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಅಭಿವೃದ್ಧಿಯಲ್ಲಿ ವಿವಿಧ ಇಲಾಖೆಗಳ ಅನುದಾನ ಸಮರ್ಪಕವಾಗಿ ಬಳಕೆಯಾಗಬೇಕು. ವಿಶೇಷವಾಗಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ವಿವಿಧ ಇಲಾಖೆಗಳು, ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಅನುದಾನ ಸಮರ್ಪಕವಾಗಿ ಬಳಕೆ, ವಿವಿಧ ಇಲಾಖೆಗಳ ವ್ಯಾಪ್ತಿಯ ರಾಜ್ಯ ಮತ್ತು ಜಿಲ್ಲಾ ವಲಯ ಯೋಜನೆಗಳ ಅಡಿಯ ಅನುದಾನ ಸದ್ಬಳಕೆ, ಸೇರಿದಂತೆ ಗ್ರಾಮ ಸ್ವರಾಜ್ಯ ಕಾಯಿದೆಯ ಉಲ್ಲಂಘನೆ ಯಾಗದಂತೆ ವಿವಿಧ ಅಭಿವೃದ್ಧಿ ಕಾರ್ಯಗಳು ಸಮರ್ಪಕವಾಗಿ ನಡೆಯಬೇಕು. ಅನುದಾನ ಹಂಚಿಕೆಯಲ್ಲಿ ಸಮಸ್ಯೆಗಳು, ಕೊರತೆಗಳು, ಬೇಡಿಕೆ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಸಲಹೆ ಸೂಚನೆಗಳನ್ನು ಪಡೆಯಲಾಗುತ್ತಿದೆ ಎಂದು ಅವರು ತಿಳಿಸಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಜಿಲ್ಲಾ ವಲಯ ಯೋಜನೆಗಳ ಅನುದಾನ, ರಾಜ್ಯ ವಲಯ ಯೋಜನೆಗಳಿಗೆ ಹಸ್ತಾಂತರವಾಗಿರುವ ಬಗ್ಗೆಯೂ ಅಧ್ಯಯನ ಮತ್ತು ಸಲಹೆ ಸೂಚನೆಗಳನ್ನು ಪಡೆಯಲಾಗುತ್ತಿದೆ. ಆಡಳಿತ ಸುಧಾರಣೆ ಮತ್ತು ಹಣಕಾಸು ಸುಧಾರಣೆಗಾಗಿ ಸಲಹೆ ಸೂಚನೆಗಳನ್ನು ಪಡೆಯಲಾಗುತ್ತಿದ್ದು, ಲಭ್ಯವಿರುವ ಅನುದಾನವನ್ನು ಸಹ ಸಂಬAಧಪಟ್ಟ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳು ಸಮರ್ಪಕವಾಗಿ ಬಳಸಿಕೊಳ್ಳುವಂತೆ ಅವರು ಸಲಹೆ ನೀಡಿದರು.
ಜಿಲ್ಲಾ ಪಂಚಾಯತಿಗಳಿಗೆ ನಿಗದಿಪಡಿಸಿದ ಅನಿರ್ಬಂಧಿತ ಅನುದಾನದ ಮಾಹಿತಿ:https://rzp.io/l/uj2sOh7nO5
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ವಿವಿಧ ಇಲಾಖೆ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಬಿಡುಗಡೆಯಾಗುವ ಅನುದಾನ ಮತ್ತು ಸಂಪನ್ಮೂಲಗಳ ಕ್ರೂಢೀಕರಣ ಹಾಗೂ ಬಳಕೆ ಅತ್ಯಂತ ಮುಖ್ಯವಾಗಿದ್ದು, ವಿವಿಧ ಕುಂದುಕೊರತೆಗಳ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದ್ದಲ್ಲಿ ಸರ್ಕಾರದ ಗಮನಕ್ಕೆ ತರಲಾಗುವುದೆಂದು ಆಯೋಗದ ಅಧ್ಯಕ್ಷರು ಸಭೆಗೆ ತಿಳಿಸಿದರು.