ಯಾದಗಿರಿ : ಜುಲೈ 26, : ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ವಿವಿಧ ಇಲಾಖೆಗಳು ಮತ್ತು ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ್ ಕೋಸಂಬೆ ಅವರು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಮಕ್ಕಳ ರಕ್ಷಣಾ ವ್ಯವಸ್ಥೆ ಕುರಿತು ಭಾಗೀದಾರರೊಂದಿಗೆ ಸಮಾಲೋಚನಾ ಸಭೆ ಮತ್ತು ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಹಾಗೂ ಮಕ್ಕಳ ಪಾಲನಾ ಸಂಸ್ಥೆ, ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಮಕ್ಕಳ ರಕ್ಷಣಾ ವ್ಯವಸ್ಥೆಯ ಕುರಿತು ಸಮಾಲೋಚನಾ ಸಭೆ ನಡೆಸಿದರು.
ಜಿಲ್ಲಾಧಿಕಾರಿ ಡಾ.ಸುಶೀಲ.ಬಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗರಿಮಾ ಪನ್ವಾರ, ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾಜೋಲ್ ಪಾಟೀಲ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಡಾ.ಹಣಮಂತ್ರಾಯ ಸಿ ಕರಡ್ಡಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಧರಣೇಶ ಎಸ್‌ಪಿ, ಮಹಿಳಾ ಮತ್ತು ಮಕ್ಕಳ ಡಿಹೆಚ್‌ಓ ಡಾ.ಪ್ರಭುಲಿಂಗ ಮಾನಕರ್, ಇಲಾಖೆಯ ಉಪ ನಿರ್ದೇಶಕ ವೀರನಗೌಡ, ಮಕ್ಕಳ ರಕ್ಷಣಾ ಅಧಿಕಾರಿ ದಶರಥನಾಯಕ, ಮಕ್ಕಳ ರಕ್ಷಣಾಧಿಕಾರಿ (ಸಂಸ್ಥಿಕ) ಗೋವಿಂದ್ ರಾಥೋಡ್ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾಮಟ್ಟದ, ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.