ಸ್ಥಳೀಯ

ಬೀದಿ ಬದಿ ವ್ಯಾಪಾರಿಗಳಿಗೆ ಪಿಎಂ ಸ್ವನಿಧಿ ಯೋಜನೆಯಡಿ ಸಕಾಲಕ್ಕೆ ಸಾಲ ಸೌಲಭ್ಯ ಒದಗಿಸಿ : ಜಿಲ್ಲಾಧಿಕಾರಿ ಡಾ.ಸುಶೀಲ.ಬಿ

WhatsApp Group Join Now
Telegram Group Join Now

ಯಾದಗಿರಿ : ಜುಲೈ 20, : ಬಡವರಿಗಾಗಿ ಜಾರಿಗೊಳಿಸಿರುವ ಪಿಎಂ ಸ್ವನಿಧಿ ಯೋಜನೆಗಳಡಿ ಬ್ಯಾಂಕರುಗಳು ವಿಳಂಬ ಧೋರಣೆ ಅನುಸರಿಸದೇ ತ್ವರಿತವಾಗಿ ಸಕಾಲಕ್ಕೆ ಸಾಲ ವಿತರಣೆ ಮಾಡಲು ಕ್ರಮ ವಹಿಸಿ, ಸಾರ್ವಜನಿಕರೊಂದಿಗೆ ವಿನಯದಿಂದ ವರ್ತಿಸಿ ದೂರು ಬರದಂತೆ ಕಾರ್ಯನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಡಾ.ಸುಶೀಲ.ಬಿ ಅವರು ಕಟ್ಟುನಿಟ್ಟಾಗಿ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

ಹಂತ ಹಂತವಾಗಿ ನೀಡುವ ಸಾಲ ಯೋಜನೆಯಲ್ಲಿ ಎರಡನೇ ಹಂತದಲ್ಲಿ ಯಾದಗಿರಿ ಜಿಲ್ಲೆಯು ರಾಜ್ಯಕ್ಕೆ ಮೊದಲನೇ ಸ್ಥಾನ ಪಡೆದಿದ್ದು, ಈ ಯೋಜನೆಗೆ ಬೀದಿ ಬದಿ ವ್ಯಾಪಾರಿಗಳಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಬ್ಯಾಂಕ್ ಗಳು ಹೆಚ್ಚಿನ ಆಸಕ್ತಿ ವಹಿಸಿ ಅರ್ಹ ಫಲಾನುಭವಿಗಳಿಗೆ ಸಾಲ ಸೌಲಭ್ಯ ಒದಗಿಸಿ ನಿಗದಿತ ಗುರಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ನೀಡುವ ಯೋಜನೆಯಲ್ಲಿ ವಿವಿಧ ನಗರಗಳಲ್ಲಿ ಸಾಲ ಮಂಜೂರಾದರೂ ವಿತರಣೆ ಮಾಡದೇ ಇರುವುದು ದೂರುಗಳು ಬರುತ್ತಿವೆ. ಸದರಿ ಅರ್ಜಿಗಳನ್ನು ವಿಲೇವಾರಿ ಮಾಡಿ ಸಾಲ ಸೌಲಭ್ಯ ಒದಗಿಸಿಬೇಕು. ನಿರ್ಲಕ್ಷö್ಯ ವಹಿಸಿದರೆ ಸಂಬAಧಿಸಿದ ಬ್ಯಾಂಕುಗಳ ವ್ಯವಸ್ಥಾಪಕರೇ ನೇರ ಹೊಣೆಯಾಗುತ್ತೀರಿ ಎಂದು ಎಚ್ಚರಿಕೆ ನೀಡಿದರು.

ಕಕ್ಕೇರಾ, ಕೆಂಭಾವಿ, ಗುರುಮಿಠಕಲ್ ನಗರದ ಎಸ್ ಬಿ ಐ ಬ್ಯಾಂಕ್ ಗಳು ಹಾಗೂ ಸುರಪುರ ನಗರದ ಕರ್ನಾಟಕ ಬ್ಯಾಂಕ್ ಗಳಲ್ಲಿ ಹೆಚ್ಚಿನ ಅರ್ಜಿಗಳು ಬಾಕಿ ಇರುವುದು ಕಂಡು ಬಂದಿದ್ದು ಅರ್ಜಿ ವಿಲೇವಾರಿಗೆ  ಕ್ರಮ ವಹಿಸಬೇಕು ಎಂದು ಸೂಚಿಸಿದರು. 2024-25 ನೇ ಸಾಲಿನ ಡೇ-ನಲ್ಮಾ ಯೋಜನೆಯಡಿಯ ಎಲ್ಲಾ ಉಪಘಟಕಗಳಲ್ಲಿ ನಿಗದಿತ ಅವಧಿ ಒಳಗಾಗಿ ಪ್ರಗತಿ ಸಾಧಿಸಲು ನಗರ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತ, ಮುಖ್ಯಾಧಿಕಾರಿಗಳು ಹಾಗೂ ಯೋಜನೆಗೆ ಸಂಬAಧಿಸಿದ ಸಿಬ್ಬಂದಿ ವರ್ಗದವರಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಸಾರ್ವತ್ರಿಕ ರಜೆ ದಿನಗಳಲ್ಲಿ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಎಲ್ಲಾ ಬ್ಯಾಂಕಿನ ಎಟಿಎಮ್‌ಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ, ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದು ಕಂಡು ಬಂದಿರುತ್ತದೆ. ಪ್ರಯುಕ್ತ ಸಾರ್ವತ್ರಿಕ ರಜೆ ದಿನಗಳಲ್ಲಿಯೂ ಸಹ ಎಲ್ಲಾ ಬ್ಯಾಂಕಿನ ಎಟಿಎಮ್‌ಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಲು ನೋಡಿಕೊಳ್ಳುವಂತೆ ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಕ್ರಮ ವಹಿಸಲು ಸೂಚಿಸಿದರು.

ಕೌಶಲ್ಯಾಭಿವೃದ್ದಿ ಇಲಾಖೆಯ ಸಹಾಯಕ ನಿರ್ದೇಶಕ ಬಸಪ್ಪ ಎಸ್ ತಳವಾಡಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಹಾಗೂ ಪೌರಾಯುಕ್ತ ಲಕ್ಷಿö್ಮÃಕಾಂತ, ಜಿಲ್ಲಾ ಲೀಡ್ ವ್ಯವಸ್ಥಾಪಕ ಭೀಮರಾವ್ ಪಂಚಾಳ, ಕೌಶಲ್ಯಾಭಿವೃದ್ದಿ ಇಲಾಖೆ ಅಭಿಯಾನ ವ್ಯವಸ್ಥಾಪಕ ವಿಜಯಕುಮಾರ ಪಾಟೀಲ, ನಗರಸಭೆ ಸಮುದಾಯ ಸಂಘಟನಾಧಿಕಾರಿ ಭೀಮಣ್ಣ ವೈದ್ಯ ಸೇರಿದಂತೆ ವಿವಿಧ ಬ್ಯಾಂಕುಗಳ ವ್ಯವಸ್ಥಾಪಕರುಗಳು, ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು, ಮುಖ್ಯಾಧಿಕಾರಿಗಳು, ಸಮುದಾಯ ಸಂಘಟನಾಧಿಕಾರಿಗಳು, ಸಮುದಾಯ ಸಂಘಟಕರು ಉಪಸ್ಥಿತರಿದ್ದರು.

ನಿಮ್ಮ ಸಹಾಯವಿಲ್ಲದೆ ಏನನ್ನೂ ಮಾಡಲು ಆಗದು, ನಿಮಗನ್ನಿಸಿದಷ್ಟು ಸಹಾಯ ಮಾಡಿ.
WhatsApp Group Join Now
Telegram Group Join Now

Related Posts