ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಕುಷ್ಠರೋಗ ಪ್ರಕರಣಗಳ ಪತ್ತೆ ಅಭಿಯಾನದ ಪೂರ್ವಸಿದ್ಧತಾ ಸಭೆಯ ನಡೆಸಿ, ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಅಭಿಯಾನ ಕುರಿತ ಪ್ರಚಾರ ಸಾಮಗ್ರಿ ಹಾಗೂ ಭಿತ್ತಿ ಪತ್ರಗಳನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಹೆಚ್ಚಿನ ಪ್ರಕರಣಗಳು ಕಂಡು ಬರುವಂತಹ ಪ್ರದೇಶಗಳಲ್ಲಿ ಗುರುತಿಸಿ, ಜನಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಸೂಚಿಸಿದರು.
ಕುಷ್ಠರೋಗ ಪ್ರಕರಣಗಳ ಪತ್ತೆ ಹಚ್ಚುವ ಅಭಿಯಾನ ಯಶಸ್ವಿಗೊಳಿಸಿ : ಜಿಲ್ಲಾಧಿಕಾರಿ ಡಾ.ಸುಶೀಲ.ಬಿ
ಯಾದಗಿರಿ : ಜುಲೈ 26, ( jana aakrosha) : ಜಿಲ್ಲೆಯಲ್ಲಿ ಕುಷ್ಠ ರೋಗ ನಿಯಂತ್ರಣಕ್ಕೆ ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು. ಅಭಿಯಾನವನ್ನು ಯಶಸ್ವಗೊಳಿಸಲು ಸರ್ವ ರೀತಿಯ ಕ್ರಮಗಳನ್ನು ಕೈಗೊಳ್ಳುವದರ ಮೂಲಕ ಜಿಲ್ಲೆಯನ್ನು ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸುವ ದಿಶೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಸುಶೀಲ ಬಿ. ಅವರು ಸೂಚಿಸಿದರು.
ಕುಷ್ಠರೋಗ ಪ್ರಕರಣ ಪತ್ತೆಗಾಗಿ ಆರೋಗ್ಯ ಇಲಾಖೆ ಸಿಬ್ಬಂದಿಗಳೊAದಿಗೆ ಅಗತ್ಯವಿದ್ದಲ್ಲಿ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಸೇವೆಯನ್ನು ಪಡೆದುಕೊಂಡು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು. ಕುಷ್ಠರೋಗ ಪ್ರಕರಣ ಕಂಡು ಬಂದವರ ಕುಟುಂಬದವರಿಗೂ ಎಸ್.ಡಿ.ಆರ್ (ಏಕ ಔಷಧ ರಿಫಾಂಪಿಷನ್) ಔಷಧಿಯನ್ನು ನೀಡಲು ಜಿಲ್ಲಾಧಿಕಾರಿ ಸೂಚಿಸಿದರು.
ಕುಷ್ಠರೋಗವು ಮೈಕ್ರೋಬ್ಯಾಕ್ಟೀರಿಯಂ ಲೆಪ್ರೆ ಎಂಬ ರೋಗಾಣುವಿನಿಂದ ಬರುತ್ತದೆ. ದೇಹದ ಮೇಲೆ ಯಾವುದೇ ಸ್ಪರ್ಶ ಜ್ಞಾನವಿಲ್ಲದ ತಿಳಿತಿಳಿ ಅಥವಾ ತಾಮ್ರದ ಬಣ್ಣದ ಮಚ್ಚೆಗಳು ಕಾಣಿಸುವುದು, ಕೈಕಾಲುಗಳಲ್ಲಿ ಜೋಮು ಹಿಡಿದು ಸ್ಪರ್ಶಜ್ಞಾನ ಇಲ್ಲದಿರುವುದು, ಮುಖ ಅಥವಾ ಕೈಕಾಲುಗಳಲ್ಲಿ ಎಣ್ಣೆ ಸವರಿದಂತೆ ಹೊಳಪು ಇರುವುದು ಕಂಡುಬAದರೆ ತಕ್ಷಣ ಹತ್ತಿರದ ಸರ್ಕಾರಿ ಆಸ್ಪತ್ರೆಗಳಲ್ಲಿ ಪರೀಕ್ಷಿಸಿಕೊಳ್ಳಬೇಕು.
ರೋಗ ಲಕ್ಷಣ ಕಂಡುಬAದಲ್ಲಿ ಬಹು ಔಷಧ ಚಿಕಿತ್ಸೆಯಿಂದ ಸಂಪೂರ್ಣವಾಗಿ ಗುಣಪಡಿಸಬಹುದು. ಈ ಬಹು ಔಷಧ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ದೊರೆಯುತ್ತದೆ. ಆರಂಭಿಕ ಹಂತದಲ್ಲಿ ರೋಗವನ್ನು ಗುರುತಿಸಿ ಕ್ರಮಬದ್ಧ ಚಿಕಿತ್ಸೆ ಪಡೆದಲ್ಲಿ ಅಂಗವಿಕಲತೆಯನ್ನು ತಡೆಗಟ್ಟಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಪ್ರಭುಲಿಂಗ ಮಾನಕರ್, ಆರ್.ಸಿ.ಹೆಚ್.ಓ ಡಾ.ಮಲ್ಲಪ್ಪ, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ಸಾಜಿದ್, ಯಾದಗಿರಿ ವೈಧ್ಯಾಧಿಕಾರಿ ಡಾ.ಹಣಮಂತರೆಡ್ಡಿ, ಮಹಿಳಾ ಮತ್ತು ಮಕ್ಕಳು ಕಲ್ಯಾಣ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವೀರನಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.