ಸ್ಥಳೀಯ

ಜನ, ಜಾನುವಾರುಗಳಿಗೆ ನೀರು, ಮೇವಿನ ಅಭಾವ ಆಗದಂತೆ ನೋಡಿಕೊಳ್ಳಿ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ

WhatsApp Group Join Now
Telegram Group Join Now

ಜನ, ಜಾನುವಾರುಗಳಿಗೆ ನೀರು, ಮೇವಿನ ಅಭಾವ ಆಗದಂತೆ ನೋಡಿಕೊಳ್ಳಿ
ಜಿಲ್ಲಾಧಿಕಾರಿ ಡಾ.ಸುಶೀಲ.ಬಿ

ಯಾದಗಿರಿ : ಮಾರ್ಚ್ 26, : ತೀವ್ರ ಬರ ಇರುವ ಹಿನ್ನೆಲೆಯಲ್ಲಿ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಇಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ತೀವ್ರ ನೀರಿನ ಸಮಸ್ಯೆ ಎದುರಿಸುತ್ತಿರುವ ಕಡೆಗಳಲ್ಲಿ ಖಾಸಗಿ ಬೋರ್‌ವೆಲ್‌ಗಳ ನೀರನ್ನು ಪ್ರಥಮ ಆದ್ಯತೆ ಮೇಲೆ ಪಡೆದು ನೀರು ಕಲ್ಪಿಸಬೇಕು. ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಸಂಬAಧಿಸಿದAತೆ ಟೆಂಡರ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವ ಜೊತೆ ಸಕಾಲಕ್ಕೆ ಬಿಲ್ಲು ಪಾವತಿಯಾಗುವಂತೆ ನೋಡಿಕೊಳ್ಳಲು ಸೂಚನೆ ನೀಡಿದರು.

ಜಿಲ್ಲೆಯ ನಾರಾಯಣಪುರ ಜಲಾಶಯ, ಭೀಮ ನದಿ, ನೀರು ಅನಧಿಕೃತವಾಗಿ ಪಂಪ್‌ಸೆಟ್‌ಗಳ ಮೂಲಕ ನೀರು ಪಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು, ಈಗಾಗಲೇ ರಚಿಸಲಾಗಿರುವ ತಂಡಗಳು ತೀವ್ರ ನಿಗಾ ಇಡುವಂತೆ ಸೂಚಿಸಿದ ಅವರು ಜನ, ಜಾನುವಾರುಗಳಿಗೆ ಕುಡಿಯಲು ನೀರು ಕೊರತೆಯಾಗದಂತೆ ಎಚ್ಚರಿಕೆ ವಹಿಸುವಂತೆ ಅವರು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ನೋಡಿಕೊಳ್ಳಲು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಪಶುಸಂಗೋಪನಾ ಇಲಾಖೆ ಉಪ ನಿರ್ದೇಶಕರು ಮಾತನಾಡಿ 47 ವಾರಗಳ ಕಾಲ ಉಪಯೋಗವಾಗುವಸ್ಟು ಮೇವಿನ ಲಭ್ಯತೆ ಇದೆ ಎಂದು ಅವರು ಸಭೆಗೆ ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Group Join Now
Telegram Group Join Now

Related Posts