ಸ್ಥಳೀಯ

ಪ್ರವಾಹ-ಅತಿವೃಷ್ಟಿಯಂತಹ ಪರಿಸ್ಥಿತಿ ಎದುರಿಸಲು ಅಧಿಕಾರಿಗಳು ಸನ್ನದ್ಧರಾಗಿರಿ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್

WhatsApp Group Join Now
Telegram Group Join Now

ಯಾದಗಿರಿ : ಜೂನ್ 11, (JA) : ಮುಂಬರುವ ದಿನಗಳಲ್ಲಿ ಪ್ರವಾಹ ಮತ್ತು ಅತಿವೃಷ್ಟಿ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ಸನ್ನದ್ಧರಾಗಿರುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಹಜ್, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಮನೋಜ್ ಜೈನ್ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು ಮುಂಬರುವ ದಿನಗಳಲ್ಲಿ ಪ್ರವಾಹ ಮತ್ತು ಅತಿವೃಷ್ಟಿ ಗಳಂತಹ ಪರಿಸ್ಥಿತಿಗಳನ್ನು ಎದುರಿಸಲು ಅಧಿಕಾರಿಗಳು ಸರ್ವರೀತಿಯಿಂದ ಸನ್ನದ್ಧರಾಗಿರಬೇಕು. ನದಿ, ಹಳ್ಳಗಳು ಹಾಗೂ ತಗ್ಗು ಪ್ರದೇಶಗಳ ವ್ಯಾಪ್ತಿಯಲ್ಲಿರುವ ಗ್ರಾಮಗಳು, ರಸ್ತೆ ಹಾಗೂ ರೈಲ್ವೆ ಕ್ರಾಸಿಂಗ್‌ಗಳನ್ನು ಈಗಿನಿಂದಲೇ ಗುರುತಿಸಿ ಇಟ್ಟುಕೊಳ್ಳಬೇಕು. ನೋಡಲ್ ಅಧಿಕಾರಿಗಳು ಮತ್ತು ಸಂಬAಧಿಸಿದ ಅಧಿಕಾರಿಗಳು ಪೊಲೀಸ್ ಇಲಾಖೆಯೊಂದಿಗೆ ನಿರಂತರ ಸಂಪರ್ಕ ಇಟ್ಟುಕೊಳ್ಳುವ ಮೂಲಕ ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ಮುಂದಿನ ದಿನಗಳಲ್ಲಿ ಸನ್ನದ್ದರಾಗಿರುವಂತೆ ಸೂಚನೆ ನೀಡಿದರು.

ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ವಿಶೇಷವಾಗಿ ಕೊಳವೆ ಭಾವಿಗಳ ಮೇಲೆ ಅವಲಂಬನೆ ಇರುವ ವಿವಿಧ ಗ್ರಾಮಗಳ ಬಗ್ಗೆ ಯೋಜನೆ ರೂಪಿಸಿ ಅತ್ಯಂತ ಕಡಿಮೆ ಜಲ ಸಂಪನ್ಮೂಲ ಇರುವ ಗ್ರಾಮಗಳಿಗೆ ಆದ್ಯತೆ ನೀಡಿ, ಆ ಗ್ರಾಮಗಳ ವ್ಯಾಪ್ತಿಯಲ್ಲಿ ಅಂತರ್ಜಲ ಹೆಚ್ಚಿಸುವಂತಹ ಸಣ್ಣಪುಟ್ಟ 10 ರಿಂದ 20 ಅಡಿ ಅಗಲವಿರುವ ಮತ್ತು ಕಾಂಕ್ರೀಟ್ನಿAದ ಮುಚ್ಚಳ ಇರುವಂತಹ ಗುಂಡಿಗಳನ್ನು ತೋಡುವ ಮೂಲಕ ಅಂತರ್ಜಲ ಹೆಚ್ಚಿಸಲು ವಿಶೇಷ ಗಮನ ನೀಡುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ಸರಬರಾಜು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅದರಂತೆ ಗ್ರಾಮ ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಜಲ ಸಂಗ್ರಹಗಾರ ನೀರು ಸರಬರಾಜು, ಪೈಪ್ ಲೈನ್ ಸೇರಿದಂತೆ ಜಲ ಸಂಪನ್ಮೂಲಗಳನ್ನು ಪರೀಕ್ಷಿಸಿ ಜನರಿಗೆ ಶುದ್ಧ ಕುಡಿಯುವ ನೀರು ಸರಬರಾಜು ಆಗುವ ದಿಶೆಯಲ್ಲಿ ಸಂಬAಧಿಸಿದ ಅಧಿಕಾರಿಗಳು ಕಾರ್ಯನಿರ್ವಹಿಸುವಂತೆ ಸೂಚನೆ ನೀಡಿದರು.

ಗುರುಮಿಠಕಲ್ ವ್ಯಾಪ್ತಿಯ 32 ಗ್ರಾಮಗಳಿಗೆ ನೀರು ಸರಬರಾಜು ಮಾಡುವ ಯೋಜನೆಯಡಿ ಈಗಾಗಲೇ 12 ಗ್ರಾಮಗಳಿಗೆ ನೀರು ಪೂರೈಕೆ ಮಾಡಲಾಗುತ್ತಿದ್ದು, ನೀರು ಪೂರೈಕೆಗೆ ಸಂಬAಧಪಟ್ಟ ಅಧಿಕಾರಿಗಳು, ಪಂಪಿAಗ್ ಸ್ಟೇಷನ್ ಆಪರೇಟರ್ಗಳು, ಜೆಸ್ಕಾಂ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತಿ ಹಾಗೂ ಪಟ್ಟಣ ಪಂಚಾಯತ್ ಅಧಿಕಾರಿ, ಸಿಬ್ಬಂದಿಗಳನ್ನು ಒಳಗೊಂಡ ತಾಂತ್ರಿಕ ತಂಡ ರಚಿಸಿ ಸಮಯಾನುಸಾರ ನೀರು ಪೂರೈಕೆ,ನಿರ್ವಹಣೆ ಮಾಡುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಜಿಲ್ಲೆಯಲ್ಲಿರುವ ಕೃಷ್ಣಭಾಗ್ಯ ಜಲ ನಿಗಮ ವ್ಯಾಪ್ತಿಯ ವಿಶೇಷವಾಗಿ ಕಾಲುವೆ ವ್ಯಾಪ್ತಿ ಮತ್ತು ಉಪಕಾಲವೆಗಳ ವ್ಯಾಪ್ತಿಯಲ್ಲಿನ ಜಾಗವನ್ನು ಪರಿಶೀಲಿಸಿಕೊಳ್ಳಬೇಕು ಅದರಂತೆ ಗ್ರಾಮ ಮತ್ತು ನಗರಗಳ ವ್ಯಾಪ್ತಿಯಲ್ಲಿರುವ ಜಾಗಕ್ಕೆ ಸಂಬAಧಿಸಿದAತೆ ಅಧಿಕೃತ ದಾಖಲಾತಿಗಳನ್ನು ಇಟ್ಟುಕೊಳ್ಳುವಂತೆ ಸೂಚಿಸಿದ ಅವರು ಜಿಲ್ಲಾ ಪಂಚಾಯತ್, ಸಣ್ಣ ನೀರಾವರಿ ಮತ್ತು ಸರಕಾರಿ ಕೆರೆಗಳ ಕುರಿತ ಸರ್ವೆ ವರದಿಯನ್ನು ಇಟ್ಟುಕೊಳ್ಳಬೇಕು ಭೂಮಿ ಕನ್ಸಲ್ಟೆಂಟ್, ಸಹಾಯಕ ಆಯುಕ್ತರ ಕಚೇರಿ, ಡಿಡಿಎಲ್‌ಆರ್ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಅಧಿಕೃತ ದಾಖಲಾತಿಗಳನ್ನು ಇಟ್ಟುಕೊಳ್ಳುವಂತೆ ಸೂಚನೆ ನೀಡಿದರು.

ಜಲಜೀವನ ಮಿಷನ್ ಯೋಜನೆಯಡಿ 1 ರಿಂದ 4 ನೇ ಹಂತದವರೆಗಿನ ಭೌತಿಕ ಕಾಮಗಾರಿಗಳು ಸಮರ್ಪಕವಾಗಿ ಅನುಷ್ಠಾನವಾಗಬೇಕು. ಮೌಖಿಕವಾಗಿ ಹಿಂದೆ ಉಳಿದಿರುವ 18 ಕಾಮಗಾರಿಗಳನ್ನು ತಕ್ಷಣ ಆರಂಭಿಸಬೇಕು. ಜಲಧಾರೆ ಯೋಜನೆಯಡಿ ಜಲ ಸಂಗ್ರಹಾಗಾರಗಳ ನಿರ್ಮಾಣದಲ್ಲಿ ಸಾಧಿಸಿದ ಪ್ರಗತಿ ಮತ್ತು ಇತರೆ ಕಾಮಗಾರಿಗಳ ಮತ್ತು ನಿವೇಶನಗಳ ಸಮಸ್ಯೆಯ ವರದಿಯನ್ನು ಸಂಬAಧಿಸಿದ ಅಧಿಕಾರಿಗಳು ನೀಡುವಂತೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಸಾಮಾಜಿಕ ಅರಣ್ಯೀಕರಣಕ್ಕೆ ಹೆಚ್ಚಿನ ಗಮನ ನೀಡಬೇಕು. ಪಶು ಸಂಗೋಪನೆ ಇಲಾಖೆಯ ಪಶು ವೈದ್ಯಾಧಿಕಾರಿಗಳಿಗೆ ಎಲೆಕ್ಟಿçಕಲ್ ಸ್ಕೂಟಿ ಒದಗಿಸುವ ಕುರಿತು ಪ್ರಸ್ತಾವನೆ ಸಲ್ಲಿಸಬೇಕು. ಇದರಿಂದ ರೈತರ ಜಾನುವಾರುಗಳಿಗೆ ಸಕಾಲಕ್ಕೆ ಸ್ಪಂದಿಸಲು ನೆರವಾಗುವುದು. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಯೋಜನೆ ಅಡಿಯ ಕಾಮಗಾರಿಗಳ ನಿರ್ವಹಿಸುವವರ ಕುರಿತು ವಿಶೇಷ ಗಮನ ನೀಡುವಂತೆ ಅವರು ಸೂಚನೆ ನೀಡಿ ರೈತರಿಗೆ ನೀಡಲಾಗುತ್ತಿರುವ ಪರಿಹಾರಕ್ಕೆ ಸಂಬAಧಿಸಿದAತೆ ಪಹಣಿಗೆ ಆಧಾರ್ ಲಿಂಕ್ ಮಾಡುವ ಕಾರ್ಯವನ್ನು ಮುಂಬರುವ ಒಂದು ವಾರದೊಳಗಾಗಿ ಪೂರ್ಣಗೊಳಿಸಲು ಸಂಬAಧಿಸಿದ ತಹಶೀಲ್ದಾರರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಪಶು ವೈದ್ಯಕೀಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ಆನಂತರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸಭೆ ನಡೆಸಿ ಕೆಕೆಆರ್ಡಿಬಿ, ಶಾಸಕರ ಮತ್ತು ಸಂಸದರ ಅನುದಾನದಲ್ಲಿ ಪ್ರಗತಿಯಲ್ಲಿರುವ ಕಾಮಕಾರಿಗಳ ಕುರಿತು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸುಶೀಲ.ಬಿ, ಜಿಲ್ಲಾ ಪಂಚಾಯತ ಸಿಇಓ ಗರಿಮಾ ಪನ್ವಾರ, ವಲಯ ಅರಣ್ಯ ಸಂರಕ್ಷಣಾಧಿಕಾರಿ ಕಾಜೋಲ್ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಸಂಗೀತ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Group Join Now
Telegram Group Join Now

Related Posts