ಸ್ಥಳೀಯ

ಜೆಸ್ಕಾಂ ಅಧಿಕಾರಿಗಳು ರೈತರ ಮತ್ತು ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ: ಜಿಲ್ಲಾಧಿಕಾರಿ ಡಾ.ಸುಶೀಲ ಬಿ

WhatsApp Group Join Now
Telegram Group Join Now

ಜೆಸ್ಕಾಂ ಅಧಿಕಾರಿಗಳು ರೈತರ ಮತ್ತು ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ: ಜಿಲ್ಲಾಧಿಕಾರಿ ಡಾ.ಸುಶೀಲ ಬಿ

ಯಾದಗಿರಿ: ಜೂನ್, 20 :ವಿದ್ಯುತ್ ಸಮಸ್ಯೆಗೆ ಸಂಬಂಧಿಸಿದಂತೆ ರೈತರು ಸೇರಿದಂತೆ ಯಾರೇ ಕರೆ ಮಾಡಿದರೂ ಬೆಸ್ಕಾಂ ಅಧಿಕಾರಿ ಮತ್ತು ಸಿಬ್ಬಂದಿ ತಕ್ಷಣವೇ ಕರೆ ಸ್ವೀಕರಿಸಿ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಸುಶೀಲ ಬಿ. ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜೆಸ್ಕಾಂ ಅಧಿಕಾರಿಗಳು ಮತ್ತು ಗುರುಮಿಠಕಲ್ ಕುಡಿಯುವ ನೀರು ಸರಬರಾಜು ಅಧಿಕಾರಿಗಳು ಹಾಗೂ ವಿವಿಧ ನಿಗಮಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ವಿವಿಧ ಇಲಾಖೆಯ ನಿಗಮಗಳೊಂದಿಗೆ ಸಮನ್ವಯತೆ ಕಾರ್ಯನಿರ್ವಹಿಸುವ ಮೂಲಕ ಅವರ ಬೇಡಿಕೆಗಳಿಗೆ ಸ್ಪಂದಿಸಬೇಕು. ಲೈನ್‌ಮೆನ್‌ಗಳು ತಮ್ಮ ವಲಯಗಳಲ್ಲಿ ವಾಟ್ಸ್‌ ಆ್ಯಪ್ ಗ್ರೂಪ್‌ಗಳನ್ನು ರಚಿಸಿ ಅದರಲ್ಲಿ ರೈತರನ್ನು ಸೇರಿಸಿ ಅವರ ಸಮಸ್ಯೆಗಳನ್ನು ಆಲಿಸಿ ತಕ್ಷಣ ಸ್ಪಂದಿಸಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶಿಸಿದರು.

ಜಿಲ್ಲೆಯಲ್ಲಿ ಮಳೆಗಾಲ ಶುರುವಾಗಿದ್ದು, ರೈತರು ಮುಂಗಾರಿನ ಬೆಳೆಯ ಅಪೇಕ್ಷೆಯಲ್ಲಿದ್ದಾರೆ. ವಿದ್ಯುತ್ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಮುಂಗಾರು ಪ್ರವಾಹ ಪರಿಸ್ಥಿತಿ ಎದುರಿಸಲು ಜೆಸ್ಕಾಂ ಸಿಬ್ಬಂದಿ ಸನ್ನದ್ದರಾಗಿರಬೇಕು ಎಂದರು.

ರೈತರ ಟಿಸಿ ಸುಟ್ಟರೆ ಅತೀ ಶೀಘ್ರದಲ್ಲಿ ಒದಗಿಸಿ, ವಿದ್ಯುತ್ ತಂತಿಗಳಿಗೆ ಅಪಾಯಕಾರಿಯಾಗುವ ಮರದ ಕೊಂಬೆಗಳನ್ನು ಕಡಿಯಲು ಜಂಗಲ್ ಕಟಿಂಗ್ ಸಿಬ್ಬಂದಿಗೆ ಸೂಕ್ತ ಸಲಹೆ ನೀಡುವ ಮ‌ೂಲಕ ಸಾರ್ವಜನಿಕರಿಗೆ ಪಾರದರ್ಶಕ ಮಾಹಿತಿ ನೀಡಬೇಕು ಎಂದು ಸೂಚಿಸಿದರು.

ರೈತರಿಂದ ದೂರು ಬರದಂತೆ ನೋಡಿಕೊಳ್ಳಿ , ರೈತರ ಜಮೀನಿಗೆ ವಿದ್ಯುತ್‌ ಹಾಗೂ ಟ್ರಾನ್ಸ್‌ಫಾರ್ಮರ್‌ಗಳ ತೊಂದರೆ ಆಗದಂತೆ ಕಾರ್ಯನಿರ್ವಹಿಸಿ, ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕೃತವಾದ ಅರ್ಜಿಗಳನ್ನು ಶೀಘ್ರವಾಗಿ ವಿಲೇಮಾಡಿ ಎಂದು ಸೂಚಿಸಿದರು.

‘ಜಿಲ್ಲೆಯಲ್ಲಿ 2500 ವಿದ್ಯುತ್ ಕಂಬಗಳು, ಸುಮಾರು 120 ಟಿ.ಸಿಗಳು ಗೋದಾಮಿನಲ್ಲಿ ಹೆಚ್ಚುವರಿಯಾಗಿ ಕ್ರೂಢೀಕರಿಸಿದ್ದೇವೆ ಎಂದು ಸಂಬಂಧಿಸಿದ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಜೆಸ್ಕಾಂ ಕಾರ್ಯ ನಿರ್ವಾಹಕ ಅಭಿಯಂತರರಾದ ರಾಘವೇಂದ್ರ ದುಖಾನ್, ಕಲಬುರಗಿ ಅಧೀಕ್ಷಕ ಅಭಿಯಂತರ ಖಂಡಪ್ಪ, ನಗರಸಭೆ ಪೌರಾಯುಕ್ತ ಲಕ್ಷ್ಮೀಕಾಂತ, ಜೆಸ್ಕಾಂ ಎಇಇ ಸುಜೀತಕುಮಾರ, ಅಂಬರೀಶ, ಸಂಜೀವಕುಮಾರ, ಕಳಕಪ್ಪ , ಅಶೋಕ ಚವ್ಹಾಣ, ಅಮರ‌್ಯಾ ರಾಥೋಡ್ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Group Join Now
Telegram Group Join Now

Related Posts