ರಾಜಕೀಯ

ಚುನಾವಣಾ ಪ್ರಚಾರದಿಂದ ಹಿಂದೆ ಸರಿದ ಖುಷ್ಬು

WhatsApp Group Join Now
Telegram Group Join Now

ಚೆನ್ನೈ, 8 ಏಪ್ರಿಲ್ : ತಮಿಳುನಾಡಿನಲ್ಲಿ ಬಿಜೆಪಿಯ ಪ್ರಮುಖ ಸದಸ್ಯರಲ್ಲಿ ಒಬ್ಬರಾಗಿರುವ ನಟಿ ಖುಷ್ಬು ಸುಂದರ್ ಅವರು ಲೋಕಸಭಾ ಚುನಾವಣಾ ಪ್ರಚಾರದಿಂದ ಹಿಂದೆ ಸರಿದಿದ್ದಾರೆ.

ಈ ಸಂಬಂಧ ಖುಷ್ಬು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಪತ್ರವೊಂದನ್ನು ಬರೆದಿದ್ದಾರೆ. ಪತ್ರದಲ್ಲಿ ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆ. ಕೆಲವೊಮ್ಮೆ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಆರೋಗ್ಯದ ಮೇಲೆ ಗಮನಹರಿಸಬೇಕು. ಹೀಗಾಗಿ ನಾನು ಇಂದು ಅಂತಹ ಸಂದಿಗ್ಧದಲ್ಲಿದ್ದೇ ನೆ ಎಂದಿದ್ದಾರೆ.

2019 ರಲ್ಲಿ ದೆಹಲಿಯಲ್ಲಿ ಸಂಭವಿಸಿದ ಅಪಘಾತದಿಂದ ಮೂಳೆ ಮುರಿದಿದೆ. ಕಳೆದ 5 ವರ್ಷಗಳಿಂದ ಆರೋಗ್ಯದ ಕುರಿತು ಮುನ್ನೆಚ್ಚರಿಕೆ ವಹಿಸುತ್ತಿದ್ದೇನೆ. ಆದರೂ ಸಮಸ್ಯೆ ನನ್ನನ್ನು ಕಾಡುತ್ತಿದೆ. ಹೀಗಾಗಿ ವೈದ್ಯರು ಚುನಾವಣಾ ಪ್ರಚಾರದಲ್ಲಿ ಭಾಗಿಯಾಗದಂತೆ ಸೂಚಿಸಿದ್ದಾರೆ ಎಂದು ಪತ್ರದಲ್ಲಿ ನಟಿ ತಿಳಿಸಿದ್ದಾರೆ.

WhatsApp Group Join Now
Telegram Group Join Now

Related Posts