ಯಾದಗಿರಿ : ಜುಲೈ 20, : ನಾರಾಯಣಪೂರ ಆಣೆಕಟ್ಟು ಕಾಲುವೆ ಜಾಲಕ್ಕೆ ಮುಂಗಾರು ಹಂಗಾಮಿಗೆ ನೀರು ಹರಿಸುತ್ತಿದ್ದು, ರೈತ ಬಾಂಧವರು ನೀರಿನ ಬಳಕೆಯಲ್ಲಿ ಮಿತವ್ಯಯ ಸಾಧಿಸಲು ಹಾಗೂ ಈ ದಿಶೆಯಲ್ಲಿ ಕೃಷ್ಣಾ ಭಾಗ್ಯ ಜಲ ನಿಗಮದ ಅಧಿಕಾರಿಗಳಿಗೆ ಸಹಕಾರ ನೀಡಬೇಕು ಎಂದು ಭೀಮರಾಯನಗುಡಿ ಕೃಭಾಜನಿನಿ ಜೆಬಿಸಿ ವೃತ್ತದ ಅಧೀಕ್ಷಕ ಸತೀಶ.ಆರ್ ಅವರು ಕೋರಿದ್ದಾರೆ.
ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶದ 2024-25ನೇ ಸಾಲಿನ ಮುಂಗಾರು ಹಂಗಾಮಿಗೆ ಅಗತ್ಯವಿರುವ ನೀರು ಸಂಗ್ರಹಣೆಯಾಗಿರುವುದರಿAದ, ಕೃಷ್ಣಾ ಮೇಲ್ದಂಡೆ ಯೋಜನೆಯ ಎಲ್ಲಾ ಕಾಲುವೆಗಳಲ್ಲಿ ದಿನಾಂಕ: 17.07.2024ರ ಬೆಳಿಗ್ಗೆಯಿಂದಲೇ ನೀರು ಹರಿಸಲು ತೀರ್ಮಾನಿಸಲಾಗಿದೆ.
ಕೃಷ್ಣಾ ಮೇಲ್ದಂಡೆ ಯೋಜನೆ, ಕೃಭಾಜನಿನಿ, ಜೆಬಿಸಿ ವೃತ್ತ, ಭೀಮರಾಯನಗುಡಿ ಕಛೇರಿ ಅಧೀನದಲ್ಲಿ ಬರುವ ಶಹಾಪೂರ ಶಾಖಾ ಕಾಲುವೆ, ಜೇವರ್ಗಿ ಶಾಖಾ ಕಾಲುವೆ ಮತ್ತು ಮುಡಬಾಳ ಶಾಖಾ ಕಾಲುವೆಯ ಅಚ್ಚುಕಟ್ಟು ಪ್ರದೇಶದ ಜಾಲದಡಿ 2024-25ನೇ ಸಾಲಿನ ಮುಂಗಾರು ಹಂಗಾಮಿಗಾಗಿ ದಿನಾಂಕ 17.07.2024 ರಿಂದ ಕಾಲುವೆಗಳಲ್ಲಿ ನಿರಂತರವಾಗಿ ನೀರು ಹರಿಸಲಾಗಿರುತ್ತದೆ. ಜಲಾಶಯಗಳಲ್ಲಿನ ನೀರಿನ ಸಂಗ್ರಹಣೆ ಹಾಗೂ ನೀರಿನ ಒಳಹರಿವನ್ನು ಗಮನಿಸಿ, ವಾರಾಬಂದಿ ಮಾಡುವ ಪ್ರಸಂಗ ಬಂದಲ್ಲಿ, ಚರ್ಚಿಸಿ ನಡೆಸಿ ವಾರಾಬಂದಿ ಪದ್ಧತಿ ಅನುಸರಿಸುವ ಬಗ್ಗೆ ಕ್ರಮ ಕೈಗೊಂಡು, ಪತ್ರಿಕಾ ಪ್ರಕಟಣೆ ಮೂಲಕ ತಿಳಿಸುತ್ತೇವೆ ಎಂದು ಹೇಳಿದ್ದಾರೆ.
ಕಾಲುವೆ ಜಾಲದ ಗೇಟುಗಳನ್ನು ಹಾನಿ ಮಾಡುವುದು, ಎಸ್ಕೇಪ್‌ಗಳ ಮೂಲಕ ಹಳ್ಳಕ್ಕೆ ನೀರು ಹರಿಸುವುದು, ಸೈಫನ್‌ಗಳ ಮೂಲಕ ಮಣ್ಣಿನ ಏರಿಯಲ್ಲಿ ನೀರನ್ನು ಎತ್ತಿಕೊಳ್ಳುವುದು, ಕಾಲುವೆ ಜಾಲದಲ್ಲಿ ಪಂಪುಗಳ ಮೂಲಕ ನೀರನ್ನು ಎತ್ತುವುದನ್ನು ನಿರ್ಭಂದಿಸಲಾಗಿದೆ. ಈ ಪರಸ್ಥಿತಿ ಕಂಡುಬAದರೆ, ಸಂಬAಧಿಸಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ರೈತ ಬಾಂಧವರು ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶದಲ್ಲಿ ಲಘು ನೀರಾವರಿ ಬೆಳೆಗಳನ್ನು ಮಾತ್ರ ಬೆಳೆಯಲು ವಿನಂತಿಸಲಾಗಿದೆ ಎಂದು ತಿಳಿಸಿದ್ದಾರೆ.