ಅಪರಾಧ

ಕೊಪ್ಪಳ: ಪೋಕ್ಸೋ ಪ್ರಕರಣದ ಆರೋಪಿಗೆ ಶಿಕ್ಷೆ ಮತ್ತು ದಂಡ

WhatsApp Group Join Now
Telegram Group Join Now

ಕೊಪ್ಪಳ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ.25,000 ದಂಡ ವಿಧಿಸಿ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯ(ಪೋಕ್ಸೋ) ತೀರ್ಪು ಪ್ರಕಟಿಸಿದೆ.

ಕನಕಗಿರಿ ಪೊಲೀಸ್ ಠಾಣೆ ವ್ಯಾಪ್ತಿಯ ಕನಕಗಿರಿ ಪಟ್ಟಣದ ನಿವಾಸಿ ಪ್ರದೀಪ ಆರೇರ್ ಎಂಬ ಆರೋಪಿಯು ಅದೇ ಪಟ್ಟಣದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಸಲುಗೆಯಿಂದ ಮಾತನಾಡಿಸುತ್ತ ಪ್ರೀತಿ ಬೆಳೆಸಿ, ದಿನಾಂಕ: 23-06-2021 ರಂದು ಕನಕಗಿರಿ ಪಟ್ಟಣದ ಬಾಧಿತಳ ಮನಗೆ ಹೋಗಿ ಮದುವೆಯಾಗುವುದಾಗಿ ಪುಸಲಾಯಿಸಿ ಅಪಹರಿಸಿ ಹನುಮಸಾಗರ ಗ್ರಾಮದ ಹೊರವಲಯದಲ್ಲಿರುವ ದುರುಗಮ್ಮ ದೇವಿ ಗುಡಿಗೆ ಕರೆದುಕೊಂಡು ಹೋಗಿ ರಾತ್ರಿ ಸಮಯದಲ್ಲಿ ಬಾಧಿತಳು ಅಪ್ರಾಪ್ತ ವಯಸ್ಸಿನವಳು ಎಂದು ಗೊತ್ತಿದ್ದರೂ ಬಲವಂತವಾಗಿ ಸಂಭೋಗ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಕನಕಗಿರಿ ಪೆÇಲೀಸರು ದೂರು ಸ್ವೀಕರಿಸಿದ್ದರು.

ಪ್ರಕರಣದ ತನಿಖೆಯನ್ನು ಕೈಗೊಂಡ ಗಂಗಾವತಿ ವೃತ್ತ ನಿರೀಕ್ಷಕರಾದ ಉದಯ ರವಿ ಅವರು ತನಿಖೆಯಲ್ಲಿ ಆರೋಪಿತನ ಮೇಲಿನ ಆರೋಪಣೆಗಳು ಮೇಲ್ನೋಟಕ್ಕೆ ಸಾಬೀತಾದ್ದರಿಂದ ಆರೋಪಿತನ ವಿರುದ್ಧ ನ್ಯಾಯಾಲಯಕ್ಕೆ ದೋμÁರೋಪಣೆ ಪಟ್ಟಿ ಸಲ್ಲಿಸಿದ್ದರು.

ಪ್ರಕರಣವು ಸ್ಪೇ.ಎಸ್ಸಿ(ಪೋಕ್ಸೋ) ಸಂ:19/2021 ರಲ್ಲಿ ದಾಖಲಾಗಿದ್ದು, ವಿಚಾರಣೆಯನ್ನು ನಡೆಸಿದ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಧೀಶರಾದ(ಪೆÇೀಕ್ಸೋ) ಕುಮಾರ ಡಿ.ಕೆ. ಅವರು ಆರೋಪಿ ಪ್ರದೀಪ್ ಆರೇರ ಕನಕಗಿರಿ ಮೇಲಿನ ಆರೋಪಣೆಗಳು ಸಾಬೀತಾಗಿವೆ ಎಂದು 20 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ.25,000 ಗಳ ದಂಡವನ್ನು ಭರಿಸುವಂತೆ ಆದೇಶಿಸಿ ತೀರ್ಪು ಪ್ರಕಟಿಸಿದ್ದಾರೆ. ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಗೌರಮ್ಮ ದೇಸಾಯಿ ಅವರು ವಾದ ಮಂಡಿಸಿದ್ದರು ಎಂದು ನ್ಯಾಯಾಲಯದ ತಿಳಿಸಿದೆ.

WhatsApp Group Join Now
Telegram Group Join Now

Related Posts