ಕೋಲಾರ /೨೦ ಏಪ್ರಿಲ್ : ‘ಬಿಜೆಪಿ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ೧೦ ವರ್ಷಗಳಿಂದ ಒಂದೂ ಭರವಸೆ ಈಡೇರಿಲ್ಲ. ಬರೀ ಸುಳ್ಳು ಹೇಳಿಕೊಂಡು ಬಂದು ಜನರಿಗೆ ಚೊಂಬು ಕೊಟ್ಟಿದ್ದಾರೆ’ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ದೂರಿದರು.
ನಗರದ ಹೊರವಲಯದ ಆರಾಧ್ಯ ಗ್ರ್ಯಾಂಡ್ ಹೋಟೆಲ್ನಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.
‘ರಾಜ್ಯ ಸರ್ಕಾರದ ೫ ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರ ಬದುಕು ಹಸನಾಗಿಸಿದೆ. ಲೋಕಸಭ ಚುನಾವಣೆಗೆ ೨೫ ಗ್ಯಾರಂಟಿಗಳನ್ನು ರಾಹುಲ್ ಗಾಂದಿ ಹಾಗೂ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಣೆ ಮಾಡಿದ್ದಾರೆ. ದೇಶದಲ್ಲಿ ನುಡಿದಂತೆ ನಡೆಯುವ ಏಕೈಕ ಪಕ್ಷ ಕಾಂಗ್ರೆಸ್’ ಎಂದರು.
‘ರೈತರ ಆದಾಯ ದ್ವಿಗುಣಗೊಳಿಸಿದರೇ, ೧೫ ಲಕ್ಷ ತಮ್ಮ ಖಾತೆಗೆ ಬಂತೇ, ಸ್ವಿಸ್ ಬ್ಯಾಂಕ್ನಿ0ದ ಕಪ್ಪು ಹಣ ತಂದರೇ, ಪ್ರತಿ ವರ್ಷ ಯುವಕರಿಗೆ ಎರಡು ಕೋಟಿ ಉದ್ಯೋಗ ನೀಡುವ ಭರವಸೆ ಎಲ್ಲಿ ಹೋಯಿತು, ೨೦೨೨ರೊಳಗೆ ೧೦೦ ಸ್ಮಾರ್ಟ್ ಸಿಟಿ ನಿರ್ಮಿಸಿದರೆ, ೨೦೨೨ರೊಳಗೆ ಎಲ್ಲರಿಗೂ ಪಕ್ಕಾ ಮನೆ ನಿರ್ಮಿಸಿಕೊಟ್ಟರೆ’ ಎಂದು ಪ್ರಶ್ನಿಸಿದರು.
‘ಗ್ಯಾರಂಟಿಗಳಿAದ ದೇಶ ದಿವಾಳಿ ಆಗುತ್ತದೆ ಎಂದು ಮೋದಿ, ಅಮಿತ್ ಶಾ, ವಿಜಯೇಂದ್ರ, ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಆದರೆ, ಗ್ಯಾರಂಟಿ ಸಂಬAಧ ಆರ್ಥಿಕ ತಜ್ಙರೊಂದಿಗೆ ಚರ್ಚಿಸಿದ ನಂತರವೇ ಘೋಷಣೆ ಮಾಡಲಾಗಿದೆ. ರಾಜ್ಯದ ೫ ಗ್ಯಾರೆಂಟಿಗಳನ್ನು ಘೋಷಣೆ ಮಾಡಿದಾಗ ಚುನಾವಣಾ ಗಿಮಿಕ್ಗಾಗಿ ಬೋಗಸ್ ಗ್ಯಾರಂಟಿಗಳು ಎಂದು ಟೀಕೆ ಮಾಡಿದರು, ೫ ಗ್ಯಾರಂಟಿಗಳನ್ನು ಜಾರಿ ಮಾಡಿದ ನಂತರ ರಾಜ್ಯ ಅರ್ಥಿಕವಾಗಿ ದಿವಾಳಿಯಾಗಿದೆ ಎಂದು ಟೀಕಿಸಿದರು, ಲೋಕಸಭಾ ಚುನಾವಣೆ ಬಳಿಕ ಗ್ಯಾರಂಟಿ ನಿಲ್ಲಿಸುತ್ತಾರೆ ಎಂದು ಹೇಳುತ್ತಿದ್ದಾರೆ. ಕಾಂಗ್ರೆಸ್ನವರ ದೇಹದಲ್ಲಿ ರಕ್ತದ ಕೊನೆಯ ಹನಿ ಇರುವವರೆಗೆ ಗ್ಯಾರಂಟಿ ಬಿಟ್ಟುಕೊಡಲ್ಲ’ ಎಂದು ಭರವಸೆ ನೀಡಿದರು.
‘ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡುವ ಮೂಲಕ ಕೋಮುವಾದಿ ಕೇಂದ್ರ ಸರ್ಕಾರವನ್ನು ಮನೆಗೆ ಕಳುಹಿಸಬೇಕು’ ಎಂದು ಮನವಿ ಮಾಡಿದರು.
ಚಿತ್ರ : ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಶನಿವಾರ ಪತ್ರಿಕಾಗೋಷ್ಠಿ ನಡೆಸಿದರು.