ರಾಜ್ಯ

ನಮ್ಮ ಸಂವಿಧಾನ ಬದ್ದವಾದ ಹಕ್ಕುಗಳನ್ನು ನಾವು ಪಡೆಯಲು ಯಾವುದೇ ಅಡೆತಡೆಗಳಿಲ್ಲ: ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ

WhatsApp Group Join Now
Telegram Group Join Now

ನಮ್ಮ ಸಂವಿಧಾನ ಬದ್ದವಾದ ಹಕ್ಕುಗಳನ್ನು ನಾವು ಪಡೆಯಲು ಯಾವುದೇ ಅಡೆತಡೆಗಳಿಲ್ಲ: ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ*

ಯಾದಗಿರಿ: ಜೂನ್, 12:

ನಮ್ಮ ಸಂವಿಧಾನ ಬದ್ದವಾದ ಹಕ್ಕುಗಳನ್ನು ನಾವು ಪಡೆಯಲು ಯಾವುದೇ ಅಡೆತಡೆಗಳಿಲ್ಲ, ಪಾಲಕ ಪೋಷಕರು ಎಲ್ಲಾ ಇಲಾಖೆಗಳ ಮತ್ತು ಸಂಘ-ಸಂಸ್ಥೆಗಳು ಮತ್ತು ಸಮುದಾಯದಲ್ಲಿರುವ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧಿಶರು ಹಾಗೂ ನ್ಯಾಯಿಕ ದಂಡಾಧಿಕಾರಿಗಳು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮರಿಯಪ್ಪ ಅವರು ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಯಾದಗಿರಿ, ಜಿಲ್ಲಾ ಮಕ್ಕಳ ರಕ್ಷಣ ಘಟಕ, ಪೊಲೀಸ್ ಇಲಾಖೆ, ಹಾಗೂ ಮಕ್ಕಳ ಸಹಾಯವಾಣಿ-1098 ಯಾದಗಿರಿ ರವರ ಸಂಯುಕ್ತ ಆಶ್ರಯದಲ್ಲಿ “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ”ದ ಪ್ರಯುಕ್ತ ನಗರದ ತಹಶೀಲ್ದಾರ ಕಚೇರಿಯ ಮುಂಭಾಗದಲ್ಲಿ ಜನ ಜಾಗೃತಿ ಜಾಥಾ ಹಾಗೂ ನಗರದ ಪದವಿ ಕಾಲೇಜಿನ ಸಭಾಂಗಣದಲ್ಲಿ ನಡೆದ ವೇದಿಕೆ ಕಾರ್ಯವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯು ಬಹುಮುಖ್ಯವಾಗಿ ಮಕ್ಕಳ ಹಕ್ಕುಗಳ ರಕ್ಷಣೆಗೆ ಹಾಗೂ ಶಿಕ್ಷಣದ ಪ್ರಸಾರದ ಮೂಲವಾದ ಗುರಿಯನ್ನು ಹೊಂದಿದ್ದು ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗಾಗಿ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದೆ ಎಂದರು.

*ಸಹಾಯಕ ಆಯುಕ್ತ ಪ್ರಕಾಶ ಕುದರಿ ಮಾತನಾಡಿ*: ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿಯು ಗ್ರಾಮಾಂತರ ಭಾಗದಲ್ಲಿ ರೂಡಿಯಲ್ಲಿದ್ದು, ಬಡತನ ಹಾಗೂ ಶಿಕ್ಷಣದ ಕೊರತೆಯಿಂದ ಹಳ್ಳಿಗಳು ಮುಕ್ತವಾದಗ ಮಾತ್ರ ನಮ್ಮ ಜಿಲ್ಲೆಯು ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿಯಿಂದ ಹೊರಬರಲು ಸಾಧ್ಯ ಅಲ್ಲದೆ ಪಾಲಕರಲ್ಲಿ ಮಕ್ಕಳಿಗೆ ಶಿಕ್ಷಣ ನೀಡಬೇಕು ಎಂಬ ಮನೋಬಾವ ಬೆಳೆದಾಗ ಮಾತ್ರ ಬಾಲಕಾರ್ಮಿಕ ಮತ್ತು ಕಿಶೋರಕಾರ್ಮಿಕ ಪದ್ಧತಿ ನಿರ್ಮುಲನೆ ಸಾಧ್ಯ ಎಂದು ನುಡಿದರು.

*ವಿಶೇಷ ಉಪನ್ಯಾಸ ನೀಡಿದ ಸಾಹಿತಿಗಳಾದ ಗುರುಪ್ರಸಾದ ವೈದ್ಯ ಮಾತನಾಡಿ*; ಎರಡನೇ ಮಹಾಯುದ್ಧವು ವಿಶ್ವದಾದ್ಯಂತ ಬಾಲಕಾರ್ಮಿಕ ಪದ್ಧತಿ ಎಂಬ ಭೀಕರ ಪರಿಣಾಮ ಹರಡಿತು ವಿಶ್ವಸಂಸ್ಥೆ ಹಾಗೂ ವಿಶ್ವ ನಾಯಕರು ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಏಕರೂಪ ನೀತಿಗಳನ್ನು ಜಾಗತಿಕ ಮಟ್ಟದಲ್ಲಿ ರೂಪಿಸಿ, ಕಾರ್ಯರೂಪಕ್ಕೆ ತಂದಾಗ ಮಾತ್ರ ಬಾಲಕಾರ್ಮಿಕ ಪದ್ಧತಿಯನ್ನು ಕೊನೆಗೊಳಿಸಲು ಸಾಧ್ಯ ಎಂದು ತಿಳಿಸಿದರು.

*ಶಿಶು ಯೋಜನಾ ಅಭಿವೃದ್ಧಿ ಅಧಿಕಾರಿಗಳಾದ ಲಾಲ್‌ಸಾಬ್ ಮಾತನಾಡಿ*: ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆಯು ಕೇವಲ ಅಧಿಕಾರಿಗಳಿಂದ ಮಾತ್ರ ಸಾಧ್ಯವಿಲ್ಲ ಇದಕ್ಕೆ ವಿದ್ಯಾರ್ಥಿಗಳು,ಪಾಲಕರು/ಪೋಷಕರು ಕೈ ಜೋಡಿಸಬೇಕು ಎಂದರು ಹಾಗೂ ಮಕ್ಕಳ ಯಾವುದೇ ಸಮಸ್ಯೆ ಇದ್ದಲ್ಲಿ 1098 ಅಥವಾ 112 ಸಂಖ್ಯೆಗೆ ಕರೆ ಮಾಡಿ ಎಂದು ತಿಳಿಸಿದರು.

*ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕರಾದ ರಿಯಾಜ್ ಪಟೇಲ್ ವರ್ಕ್ನಳ್ಳಿ ರವರು ಮಾತನಾಡಿ*:, ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿಯ ನಿರ್ಮೂಲನೆಗಾಗಿ ಜಿಲ್ಲೆಯಾದ್ಯಂತ ಕಾರ್ಮಿಕ ಇಲಾಖೆಯ ಜಿಲ್ಲಾ ಬಾಲಕಾರ್ಮೀಕ ಯೋಜನಾ ಸೊಸೈಟಿಯ ವತಿಯಿಂದ ನಿರಂತ್ರವಾಗಿ ಕಾನೂನು ಅರಿವು-ನೆರವು ಮತ್ತು ಜನ-ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಇದರಿಂದ ಮಕ್ಕಳಿಗೆ ಮತ್ತು ಸಮುದಾಯದ ಪ್ರತಿಯೊಬ್ಬರಿಗು ಕೂಡ ಶಿಕ್ಷಣದ ಮಹತ್ವವನ್ನು ವಿವರಿಸಿ ಮಕ್ಕಳು ಬಾಲಕಾರ್ಮಿಕರಾಗದಂತೆ ಜಾಗೃತಿ ಮೂಡಿಸಲು ಸಾಧ್ಯ ಎಂದು ತಿಳಿಸಿದರು.

*ಜೆ.ಎಂ.ಎಫ್.ಸಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ರಾಹುಲ್ ಚಾಂಬರ್ ಅವರು ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿರುವ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು.*

ಜಾಥಾ ಜನ-ಜಾಗೃತಿ ಕಾರ್ಯಕ್ರಮವು ನಗರದ ಮುಖ್ಯ ರಸ್ತೆಗಳಲ್ಲಿ ಇರುವ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರಿಗೆ ಜಾಗೃತಿಯನ್ನು ಮೂಡಿಸಲಾಯಿತು. ನಗರದ ಬಸ್‌ನಿಲ್ದಾಣ ಮತ್ತು ರೈಲು ನಿಲ್ದಾಣಗಳಲ್ಲಿ ಬಾಲಕಾರ್ಮಿಕ ಮತ್ತು ಕಿಶೋರಕಾರ್ಮಿಕ ಪದ್ಧತಿ ನಿರ್ಮೂಲನೆಯ ಕುರಿತು ಸ್ಟಾಲ್‌ಗಳನ್ನು ಹಾಕಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು.ಈ ಸಂದರ್ಭದಲ್ಲಿ ಮಕ್ಕಳ ಕ್ಷೇತ್ರದಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸಿದ ಸಂಘ-ಸಂಸ್ಥೆಗಳಿಗೆ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸಿವಿಲ್ ನ್ಯಾಯಾಧೀಶರಾದ ಅರುಣ್ ಚೌಗುಲೆ, ತಹಶೀಲ್ದಾರ ಯಲ್ಲಪ್ಪ ಸುಬೇದಾರ, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕಿ ರೇಖಾ ಮ್ಯಾಗೇರಿ, ಡಿಡಿಪಿಐ ಮಂಜುನಾಥ, ಜಂಟಿ ಕೃಷಿ ನಿರ್ದೇಶಕ ಕೆ.ಹೆಚ್. ರವಿ, ಸರಕಾರಿ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಸುಭಾಶ್ಚಂದ್ರ ಕೌಲಗಿ, ಯಾದಗಿರಿ ಟಿಹೆಚ್ಓ ಡಾ.ಹಣಮಂತರೆಡ್ಡಿ, ಯಾದಗಿರಿ ಕಾರ್ಮಿಕ ನಿರೀಕ್ಷಕರಾದ ಸಬೇರಾ ಬೇಗಂ, ಸುರಪುರ ಕಾರ್ಮಿಕ ನಿರೀಕ್ಷಕ ಗಂಗಾಧರ, ಡಾನ್ ಬೋಸ್ಕೋ ಸಮಾಜ ಸೇವಾ ಕೇಂದ್ರದ ನಿರ್ದೇಶಕ ಫಾದರ್ ಫ್ರಾನ್ಸಿಸ್ ಶಾಬು, ವರ್ಲ್ಡ ವಿಷನ್ ಸಂಸ್ಥೆಯ ನಿರ್ದೇಶಕ ಅನಿಲ ತೇಜಪ್ಪ, ಸಾಧು ಸುಂದರ ಸಿಂಗ್ ಸಂಸ್ಥೆಯ ರವಿ ಯಡ್ಡಳ್ಳಿ ಕಾರ್ಮಿಕ ಇಲಾಖೆ ಸಿಬ್ಬಂದಿಗಳಾದ ವೆಂಕಟಪ್ಪ, ದೀಪಕ್ ಸಿಂಗ್, ಭಗತ್ ವಾಡೇಕರ್, ಸಂತೋಷ, ಅಂಬ್ರೇಶ, ವೆಂಕಟೇಶ, ಬಾಲು ನಾಯಕ, ಅಮೃತರಾವ್ ಕೊತ್ವಾಲ್ ಉಪಸ್ಥಿತರಿದ್ದರು.

WhatsApp Group Join Now
Telegram Group Join Now

Related Posts