ಸ್ಥಳೀಯ

ಮಕ್ಕಳು ಸಮಚಿತ್ತದಿಂದ ಪರೀಕ್ಷೆ ಬರೆಯಲಿ : ಶಶಿಧರ್ ಕೋಸಂಬೆ ಪರೀಕ್ಷೆ ಪೇ ಚರ್ಚೆ ಕಾರ್ಯಕ್ರಮದಲ್ಲಿ ಶಶಿಧರ ಕೋಸಂಬೆ ಭಾಗಿ

WhatsApp Group Join Now
Telegram Group Join Now

ಯಾದಗಿರಿ : ಫೆ:24:  :ಮಕ್ಕಳು ತಮ್ಮ ಜೀವನದ ಅತ್ಯಂತ ಪ್ರಮುಖ ಘಟ್ಟವಾದ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಸಮಚಿತ್ತದಿಂದ ಬರೆಯಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ ಕೋಸಂಬೆ ತಿಳಿಸಿದ್ದಾರೆ.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯುಕ್ತಾಶ್ರಯದಲ್ಲಿ  ಏರ್ಪಡಿಸಲಾಗಿದ್ದ ಪರೀಕ್ಷೆ ಪೇ ಚರ್ಚೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಶಿಕ್ಷಣ ಇಲಾಖೆಯ ಪರೀಕ್ಷೆ ನಡೆಯುವ ಪರೀಕ್ಷೆ ಕೇಂದ್ರಗಳಲ್ಲಿ ಮಕ್ಕಳಿಗೆ ಭಯ ಮುಕ್ತ ವಾತಾವರಣ ನಿರ್ಮಾಣ ಮಾಡಬೇಕು ಎಂದು ಹೇಳಿದರು.
ವಿದ್ಯಾರ್ಥಿಗಳಿಗೆ, ಪೋಷಕರಿಗೆ ಮತ್ತು ಶಿಕ್ಷಕರಿಗೆ ಏಕಕಾಲಕ್ಕೆ ಒಂದೆಡೆ ಸೇರಿಸಿ ನಡೆಸುತ್ತಿರುವ ಪರೀಕ್ಷೆ ಪೇ ಚರ್ಚೆ ಕಾರ್ಯಕ್ರಮದಿಂದ ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಕೋಸಂಬೆ ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕೆ ಪ್ರೇಮ ಮೂರ್ತಿ ಮಾತನಾಡಿ, ವಿದ್ಯಾರ್ಥಿಗಳು ಪರೀಕ್ಷೆ ಸಂದರ್ಭದಲ್ಲಿ ಆರೋಗ್ಯದ ಬಗ್ಗೆ ಗಮನ ಹರಿಸಿ, ನಿರಂತರವಾಗಿ ಓಡುವ ಅಭ್ಯಾಸ ಮೈಗೂಡಿಸಿಕೊಂಡು ಉತ್ತಮ ಫಲಿತಾಂಶ ಪಡೆಯಬೇಕು ಎಂದು ಹೇಳಿದರು.

ಯಾದಗಿರಿ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಗೋವಿಂದ ರಾಥೋಡ್, ದಶರಥ ಹಾಗೂ ಇತರರಿದ್ದರು

WhatsApp Group Join Now
Telegram Group Join Now

Related Posts