ಶಿಕ್ಷಣ

ಜೂನ್ 14 ರಿಂದ 22ರ ವರೆಗೆ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಪೂರಕ ಪರೀಕ್ಷೆಗೆ ಸಕಲ ಸಿದ್ದತೆ ಮಾಡಿಕೊಂಡು ಸುವ್ಯವಸ್ಥಿತವಾಗಿ ಶಾಂತಿಯುತವಾಗಿ ಜರುಗುವAತೆ ಕ್ರಮ ವಹಿಸಿ : ಜಿಲ್ಲಾಧಿಕಾರಿ ಡಾ.ಸುಶೀಲ.ಬಿ

WhatsApp Group Join Now
Telegram Group Join Now

ಯಾದಗಿರಿ : ಜೂನ್ 10, : ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಜೂನ್ 14 ರಿಂದ ಜೂನ್ 22 ರ ವರೆಗೆ ನಡೆಯಲಿದ್ದು, 29 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 8908 ವಿದ್ಯಾರ್ಥಿಗಳು ಹಾಜರಾಗಲಿದ್ದು ಅಧಿಕಾರಿಗಳು ಪರೀಕ್ಷೆಗೆ ಎಲ್ಲಾ ಸಿದ್ದತೆ ಮಾಡಿಕೊಂಡು ಪರೀಕ್ಷೆಗಳು ಸುವ್ಯವಸ್ಥಿತವಾಗಿ, ಶಾಂತಿಯುತವಾಗಿ ಜರುಗುವಂತೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ.ಸುಶೀಲ.ಬಿ ಅವರು ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಯ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಪರೀಕ್ಷೆಯ ಜಿಲ್ಲೆಯಾದ್ಯಂತ ಭಯ, ನಕಲು ಮುಕ್ತವಾಗಿ ನಡೆಯಬೇಕು. ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಬಗ್ಗೆ ಭಯ ಇರದಂತೆ ನೋಡಿಕೊಳ್ಳಬೇಕು. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಸೇರಿದಂತೆ ಅಗತ್ಯ ವ್ಯವಸ್ಥೆ ಮಾಡುವಂತೆ’ ಸೂಚಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಪರೀಕ್ಷೆಯ ನಿಯಮಾವಳಿಗಳಂತೆ ಕಾರ್ಯನಿರ್ವಹಿಸಬೇಕು.

ಒಂದು ವೇಳೆ ನಿರ್ಲಕ್ಷ್ಯ ಕಂಡುಬAದಲ್ಲಿ ಇಲಾಖಾ ಕ್ರಮದಂತೆ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದರು. ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶದಲ್ಲಿ ನಿಷೇಧಿ ಪ್ರದೇಶ ಎಂದು ಜಿಲ್ಲಾಧಿಕಾರಿಗಳು ಘೋಷಿಸಿ ಮತ್ತು ಸುತ್ತಲಿನ ಝಿರಾಕ್ಸ್, ಕಂಪ್ಯೂಟರ್ ಮಳಿಗೆಗಳನ್ನು ಮುಚ್ಚುವಂತೆ ಆದೇಶಿಸಿದರು.

ಪರೀಕ್ಷಾ ಕೇಂದ್ರಗಳಿಗೆ ಸುರಕ್ಷತೆಗೆ ಪೊಲೀಸರು ಬಂದೋಬಸ್ತ್ಗಾಗಿ ಸಮಯಕ್ಕಿಂತ ಮುಂಚಿತವಾಗಿಯೇ ತೆರಳಬೇಕು ಎಂದು ಸೂಚಿಸಿದ್ದಾರೆ.

ಪರೀಕ್ಷಾ ಕೇಂದ್ರಗಳಲ್ಲಿ ವಾಟರ್ ಬಾಯ್‌ಗಳ ನೇಮಕವನ್ನು ರದ್ದುಪಡಿಸಲಾಗಿದೆ. ಕುಡಿಯುವ ನೀರಿನ ವ್ಯವಸ್ಥೆಯನ್ನು ಕೊಠಡಿಗಳ ಅಂತರದಲ್ಲಿ ಕೊಠಡಿಯ ಹೊರಗೆ ವ್ಯವಸ್ಥೆ ಮಾಡಬೇಕು ಎಂದರು.

ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಪೋನ್ ಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಪಂಚಾಯತ ಸಿಇಓ ಗರಿಮಾ ಪನ್ವಾರ, ಜಿಲ್ಲಾ ಖಜಾನೆ ಅಧಿಕಾರಿ ಮಾಲಿಂಗರಾಯ ಬಿ, ಡಿಡಿಪಿಐ ಮಂಜುನಾಥ, ಶಹಾಪುರ ಬಿಇಓ ಜಾಹೀದ್ ಬೇಗಂ, ಸುರಪುರ ಬಿಇಓ ಬಸವರಾಜ ಸಿ, ಯಾದಗಿರಿ ಬಿಇಓ ಮಲ್ಲಿಕಾರ್ಜುನ ಪೂಜಾರಿ, ಜಿಲ್ಲಾ ನೋಡಲ್ ಅಧಿಕಾರಿ ಬಸನಗೌಡ ಆಲ್ದಾಳ ಸೇರಿದಂತೆ ಪರೀಕ್ಷೆಗೆ ಜವಾಬ್ದಾರಿ ವಹಿಸಿದ ಇತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Group Join Now
Telegram Group Join Now

Related Posts