ಚಿಟಗುಪ್ಪ/ಬೀದರ : ಸಾಹಿತಿ, ಚಿಂತಕರು, ಹೋರಾಟಗಾರರು, ಪರಿಸರ ಸಂರಕ್ಷಕರು, ಸಾಂಸ್ಕೃತಿಕ ಸಂಘಟಕರು, ವಿಶೇಷವಾಗಿ ಮಕ್ಕಳ ಕ್ಷೇತ್ರದಲ್ಲಿ ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ಟೊಂಕಕಟ್ಟಿಕೊಂಡು ಹಗಲಿರುಳೆನ್ನದೆ ಶ್ರಮಿಸುತ್ತಿರುವ ಕಲ್ಯಾಣ ಕರ್ನಾಟಕ ಭಾಗದ ಜನಪ್ರೀಯತೆಯ ಸ್ನೇಹ ಜೀವಿ, ಭಾವೈಕ್ಯತೆಯ ಬರಹಗಾರರಾದ ಸಂಗಮೇಶ ಎನ್ ಜವಾದಿ ರವರು 2024-25ನೇ ಸಾಲಿನ ಕರ್ನಾಟಕ ಸರ್ಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನೀಡಲಾಗುವ ಪ್ರಶಸ್ತಿಗೆ ಪಾತ್ರರಾದರು.
ಬೆಂಗಳೂರಿನ ಕಬ್ಬನ್ ಪಾರ್ಕ್ ಬಾಲ ಭವನದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ರಾಜ್ಯ ಮಟ್ಟದ ಮಕ್ಕಳ ವಯಕ್ತಿಕ ಪ್ರಶಸ್ತಿಯನ್ನು ಶ್ರೀ ಸಂಗಮೇಶ ಎನ್ ಜವಾದಿ ರವರಿಗೆ ಗೌರವಾನ್ವಿತ ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರವರು ಪ್ರದಾನ ಮಾಡಿ ನಗದು ಇಪ್ಪತ್ತೈದು ಸಾವಿರ, ಪ್ರಶಸ್ತಿ ಫಲಕದೊಂದಿಗೆ ಸನ್ಮಾನಿಸಿ,
ಗೌರವಿಸಿದರು.
ಈ ಸಂದರ್ಭದಲ್ಲಿ ಸಚಿವರು, ಶಾಸಕರು,ನಿಗಮ ಮಂಡಳಿಗಳ ಅಧ್ಯಕ್ಷರು, ಅಧಿಕಾರಿಗಳು ಉಪಸ್ಥಿತರಿದ್ದರು.